ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಇಂದು ಸಭೆ

Lingaraj Badiger
Updated On : 27 Aug 2013, 11:42 am

ಬಳ್ಳಾರಿ: ನಗರದ 11 ಮತ್ತು 12ನೇ ವಾರ್ಡ್‌ಗೆ ಸೇರಿರುವ ಕಮ್ಮಿಂಗ್ ರಸ್ತೆ ನಿರ್ಮಾಣ ಕಾಮಗಾರಿ ಕುರಿತು ಇಲ್ಲಿನ ರೆಡ್ಡಿ ಬೀದಿ ನಾಗರಿಕರ ವೇದಿಕೆಯ ನೇತೃತ್ವದಲ್ಲಿ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಸಭೆ ಕಮ್ಮಿಂಗ್ ರಸ್ತೆಯ ರಂಗನಾಥ ಶಾಲೆ ಮುಂಭಾಗದಲ್ಲಿ ಆ. 27ರಂದು ಸಂಜೆ 6 ಗಂಟೆಗೆ ಜರುಗಲಿದೆ. 11 ಮತ್ತು 12ನೇ ವಾರ್ಡ್‌ನ ಪಾಲಿಕೆ ಸದಸ್ಯ ಸುಧಾಕರ್ ದೇಸಾಯಿ ಮತ್ತು ಅಶೋಕ್, ಪಾಲಿಕೆ ಕಾರ್ಯನಿರ್ವಾಹಕ ಅಭಿಯಂತರು, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರು, ವಿಭಾಗೀಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಕಮ್ಮಿಂಗ್ ರಸ್ತೆಯ ಎಲ್ಲ ನಾಗರಿಕರು ಭಾಗವಹಿಸಿ ಯಶಸ್ವಿಗೊಳಿಸುವಂತೆ ಸಭೆಯ ಸಂಚಾಲಕ ಎಸ್. ಮಂಜುನಾಥ, ಪಿ. ಶೇಕ್ಷಾವಲಿ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ನಾಳೆ ಉಪನ್ಯಾಸ
ಬಳ್ಳಾರಿ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕವು 122ನೇ ಮಹಾಮನೆ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಆ. 28ರಂದು ಬೆಳಗ್ಗೆ 11ಕ್ಕೆ ತಾಲೂಕಿನ ಚೇಳ್ಳಗುರ್ಕಿ ಗ್ರಾಮದ ಶ್ರೀ ಎರ್ರಿತಾತ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದೆ. ವ್ಯಕ್ತಿತ್ವ ವಿಕಸನಕ್ಕೆ ಶರಣರ ವಚನಗಳು ಎಂಬ ವಿಷಯ ಕುರಿತು ಕಲಾ ಶಿಕ್ಷಕ ಕೆ.ಬಿ. ಸಿದ್ದಲಿಂಗಪ್ಪ ಉಪನ್ಯಾಸ ನೀಡಲಿದ್ದಾರೆ. ಅತಿಥಿಗಳಾಗಿ ಶ್ರೀ ಎರ್ರಿತಾತ ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರು ಎಂ. ವೇಣುಗೋಪಾಲ, ಕೆ. ರುದ್ರಗೌಡ ಪಾಲ್ಗೊಳ್ಳಲಿದ್ದಾರೆ. ಶ್ರೀ ಎರ್ರಿತಾತ ದಾಸೋಹ ಸಮಿತಿ ಅಧ್ಯಕ್ಷ ಪಿ. ಮಂಜುನಾಥ ಅಧ್ಯಕ್ಷತೆ ವಹಿಸಲಿದ್ದಾರೆ.
ಶಿಕ್ಷಕರು ಜಾಗೃತಿ ವಹಿಸಿ: ಶಾಸಕ ಬಿ.ಎಂ. ನಾಗರಾಜ
ಸಿರುಗುಪ್ಪ: ದೇಶದ ಮಾನವ ಸಂಪನ್ಮೂಲವನ್ನು ಶಕ್ತಿಯುತವಾಗಿ ಬೆಳೆಸುವಲ್ಲಿ ಶಿಕ್ಷಕರು ಜಾಗೃತಿವಹಿಸಬೇಕು ಎಂದು ಶಾಸಕ ಬಿ.ಎಂ. ನಾಗರಾಜ ಹೇಳಿದರು. ಪಟ್ಟಣದ 7 ಮತ್ತು 8ನೇ ವಾರ್ಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2012-13ನೇ ಸಾಲಿನ ಸರ್ವಶಿಕ್ಷಣ ಅಭಿಯಾನ ಯೋಜನೆಯಡಿ ರು. 21.08 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನಾಲ್ಕು ಹೆಚ್ಚುವರಿ ಕೊಠಡಿಗಳನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿ, ತಾಲೂಕಿನಲ್ಲಿ ಶಿಕ್ಷಕರು ಹಾಗೂ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಶಿಕ್ಷಣದ ಗುಣಮಟ್ಟ ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿಯೂ ಸಹ ಶೈಕ್ಷಣಿಕ ಅಭಿವೃದ್ಧಿಗೆ ಸೂಕ್ತ ಅನುದಾನ ಹಾಗೂ ಅದ್ಯತೆ ನೀಡಲಾಗುವುದು ಎಂದರು. ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಸಿ.ಎಚ್. ಶಿವಕುಮಾರ್, ಬಿಇಒ ಬಿ.ಕೆ. ರುದ್ರಮುನಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ, ಮುಖ್ಯಗುರು ಚಂದ್ರಕುಮಾರ್, ಗಂಗರಾಮ್‌ಸಿಂಗ್, ಪುರಸಭೆ ಸದಸ್ಯ ಚಿದಾನಂದ ರಾಯಡು, ವೆಂಕಟೇಶ, ಪಂಪಾಪತಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments