ಬೈಕ್ ಡಿಕ್ಕಿ: ಓರ್ವ ಸಾವು
ಬಳ್ಳಾರಿ: ಎರಡು ಬೈಕ್‌ಗಳ ಮಧ್ಯೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟ ಘಟನೆ ತಾಲೂಕಿನ ಬಾದನಹಟ್ಟಿ ಗ್ರಾಮದ ಸಮೀಪದಲ್ಲಿ ನಡೆದಿದೆ. ಮೃತನನ್ನು ಬಾದನಹಟ್ಟಿ ಗ್ರಾಮದ ಬಸವ (30) ಎಂದು ಗುರುತಿಸಲಾಗಿದೆ. ಈತನು ಬೆಳಗ್ಗೆ 5 ಗಂಟೆ ಸುಮಾರಿಗೆ ಬಳ್ಳಾರಿಗೆ ಬೈಕ್ ಮೇಲೆ ಬರುತ್ತಿರುವಾಗ ಎದುರಗಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದು, ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಬೆಳಗ್ಗೆ 9 ಗಂಟೆಗೆ ಸಾವನ್ನಪ್ಪಿದ್ದಾನೆ. ಈ ಕುರಿತು ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.