ಇಂದು ದಸರಾ ಕ್ರೀಡಾಕೂಟ
ಬಳ್ಳಾರಿ: ಭಾರತದ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ಚಂದ್ ಅವರ 108ನೇ ಜನ್ಮದಿನಾಚರಣೆ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನ ಹಾಗೂ ಬಳ್ಳಾರಿ ತಾಲೂಕು ಮಟ್ಟದ ದಸರಾ, ಮಹಿಳಾ ಕ್ರೀಡಾಕೂಟವನ್ನು ಆ. 29ರಂದು ಬೆಳಗ್ಗೆ 11ಕ್ಕೆ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಕ್ರೀಡಾಕೂಟ ಏರ್ಪಡಿಸಲಾಗಿದ್ದು, ಶಾಸಕ ಅನಿಲ್ ಲಾಡ್ ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಸದೆ ಜೆ. ಶಾಂತಾ, ಶಾಸಕರಾದ ಬಿ. ಶ್ರೀರಾಮುಲು, ಟಿ.ಎಚ್. ಸುರೇಶ್ಬಾಬು, ಈ. ತುಕಾರಾಂ, ವಿಧಾನ ಪರಿಷತ್ ಸದಸ್ಯರಾದ ಮೃತ್ಯುಂಜಯ ಜಿನಗಾ, ಅಮರನಾಥ್ ಪಾಟೀಲ್, ಜಿಪಂ ಉಪಾಧ್ಯಕ್ಷೆ ಮಮತಾ ಸುರೇಶ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಸಾವಿತ್ರಮ್ಮ, ತಾಪಂ ಅಧ್ಯಕ್ಷ ವಿ. ಗಾದಿಲಿಂಗಪ್ಪ, ಉಪಾಧ್ಯಕ್ಷೆ ಮಾರೆಮ್ಮ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಜಿಪಂ ಹಾಗೂ ತಾಪಂ ಸದಸ್ಯರು, ಮಹಾನಗರ ಪಾಲಿಕೆ ಸದಸ್ಯರು, ರಾಜ್ಯ ಯುವ ಪ್ರಶಸ್ತಿ ವಿಜೇತರು, ಎಲ್ಲ ಯುವಕ, ಯುವತಿ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ ತಿಳಿಸಿದ್ದಾರೆ.