ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ದೇವಸ್ಥಾನ ಜಾಗ ಅತಿಕ್ರಮಣ: ಕ್ರಮಕ್ಕೆ ಆಗ್ರಹ

Mainashree
Updated On : 30 Aug 2013, 10:40 am

ಹೂವಿನಹಡಗಲಿ: ತಾಲೂಕಿನ ಹಿರೇಹಡಗಲಿಯಲ್ಲಿ ಗ್ರಾಮ ದೇವತೆ ದೇವಸ್ಥಾನ ಜಾಗೆಯನ್ನು ಅತಿಕ್ರಮಿಸಿ ಮನೆಯೊಂದನ್ನು ನಿರ್ಮಿಸುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಮುಖ್ಯಮಂತ್ರಿ ಹಾಗೂ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ. ಗ್ರಾಮದ 2ನೇ ವಾರ್ಡಿನಲ್ಲಿರುವ ಗ್ರಾಮ ದೇವತೆ ದೇವಸ್ಥಾನ ಪಕ್ಕದಲ್ಲಿರುವ ಉಜ್ಜಿನಿ ನಾಗಪ್ಪ ಎಂಬುವವರು ಗ್ರಾಮದ ದೇವತಾ ಕಾರ್ಯಗಳಿಗೆ ಅನುಕೂಲವಾಗಲು ಉಳಿಸಿದ್ದ ಸರ್ಕಾರಿ ಜಾಗೆಯಲ್ಲಿ ಅನಧಿಕೃತವಾಗಿ ಮನೆಯೊಂದನ್ನು ನಿರ್ಮಿಸುತ್ತಿದ್ದು, ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಅತಿಕ್ರಮಣ ಮಾಡಿರುವ ಜಾಗೆಯನ್ನು ತೆರವುಗೊಳಿಸುವಂತೆ ಒತ್ತಾಯಿಸಿದ್ದಾರೆ.
ಈ ಬಗ್ಗೆ ಗ್ರಾಮ ಪಂಚಾಯಿತಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಮನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗೆ ಯಾವುದೇ ದಾಖಲೆಗಳನ್ನೂ ನೀಡಿಲ್ಲ. ಗ್ರಾಪಂ ಸದಸ್ಯರು ಇದಕ್ಕೆ ಪರೋಕ್ಷ ಕುಮ್ಮಕ್ಕು ನೀಡುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ಕೂಡಲೇ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮದ ಹನುಮೇಶ, ಯು. ಕೊಟ್ರಪ್ಪ, ಡಿ. ರಾಮಪ್ಪ, ಪಿ. ಸುಭಾಷ್, ಸಿ. ವೀರಭದ್ರಪ್ಪ, ಎ.ಎಂ. ಚನ್ನವೀರಯ್ಯ ಇತರರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement