ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ವಿಕಲಚೇತನರು ಮಾದರಿಯಾಗಲಿ: ಮಲ್ಲಪ್ಪ

Vishwanath S
Updated On : 5 Dec 2013, 11:03 am

ಹೊಸಪೇಟೆ: ವಿಕಲಚೇತನರು ಸಮಾಜದಲ್ಲಿನ ಉತ್ತಮ ಅವಕಾಶಗಳನ್ನು ಬಳಸಿಕೊಳ್ಳುವ ಮೂಲಕ ಉತ್ತಮ ಜೀವನ ರೂಪಿಸಿಕೊಂಡು ಇತರರಿಗೆ ಮಾದರಿ ವ್ಯಕ್ತಿಗಳಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಬೇಕು ಎಂದು ನಗರಸಭಾ ಸದಸ್ಯ ಮಲ್ಲಪ್ಪ ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿಯಿಂದ ಸರ್ದಾರ್ ಪಾಟೇಲ್ ಪ್ರೌಢಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಂಗವಿಕಲತೆ ಶಾಪವಲ್ಲ, ಅದು ಆಕಸ್ಮಿಕ ಘಟನೆಯಾಗಿದ್ದು, ವಿಕಲಚೇತನರಿಗೆ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಲು ಉತ್ತಮ ಶಿಕ್ಷಣ ನೀಡುವ ಮೂಲಕ ವಿಕಲಚೇತರನ್ನು ಸ್ವಾವಲಂಬಿ ಜೀವನ ಸಾಗಿಸಲು ಮುಂದಾಗಬೇಕು ಎಂದು ಅಶೋಕ್ ಜೀರೆ ಹೇಳಿದರು. ಕ್ಷೇತ್ರ ಸಮನ್ವಯಾಧಿಕಾರಿ ಶರಣಪ್ಪ ವಟಗಲ್ ಮಾತನಾಡಿ, ವಿಕಲಚೇತನ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರ ಸಾಕಷ್ಟು ಸೌಲಭ್ಯಗಳನ್ನು ಒದಗಿಸಿದೆ. ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಅಭಿವೃದ್ಧಿ ಹೊಂದಲು ಮುಂದಾಗಬೇಕು ಎಂದರು. ವಾತ್ಸಲ್ಯ ಟ್ರಸ್ಟ್‌ನ ಸಂಸ್ಥಾಪಕ ನಿರ್ದೇಶಕ ಸುರೇಶ ಕುಷ್ಟಗಿ ವಿಶೇಷ ಉಪನ್ಯಾಸ ನೀಡಿದರು. ಸುಭದ್ರಮ್ಮ ಮತ್ತು ಶಿವಶಂಕರ್ ಅವರನ್ನು ಸನ್ಮಾನಿಸಲಾಯಿತು. ದಸ್ತಗಿರಿಸಾಬ್ ಮತ್ತು ಶರಣಬಸವ ವಠಾರ ಪ್ರಾರ್ಥಿಸಿದರು. ಶಿವಶಂಕರ್ ಸ್ವಾಗತಿಸಿದರು. ಹನುಮಂತಪ್ಪ ವಂದಿಸಿದರು. ಕೆ. ಬಸವರಾಜ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement