ಇಂದು ಸಾಂಸ್ಕೃತಿಕ ಸೌರಭ
ಬಳ್ಳಾರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಡಿ. 10ರಂದು ಸಂಜೆ 7 ಗಂಟೆಗೆ ಜಿಲ್ಲೆಯ ಹೊಸಪೇಟೆ ತಾಲೂಕು ಕಂಪ್ಲಿಯ ಶ್ರೀ ಮಾರೆಮ್ಮ ದೇವಸ್ಥಾನ ಆವರಣದಲ್ಲಿ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ಆಯೋಜಿಸಿದೆ ಎಂದು ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜ್ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಕಂಪ್ಲಿಯ ಕೆ. ಹನುಮಂತಪ್ಪ ಕ್ಲಾರಿಯೋನೆಟ್ ವಾದನ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮದ್ಯ ಬಾಟಲಿ ವಶ
ಕೂಡ್ಲಿಗಿ: ಅನಧಿಕೃತವಾಗಿ ಮದ್ಯ ಮಾರಾಟದ ಅಂಗಡಿ ಮೇಲೆ ಪೊಲೀಸರು ದಾಳಿ ಮಾಡಿ, ಆರೋಪಿಯಿಂದ ರು. 2,029 ಮೌಲ್ಯದ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡಿರುವ ಘಟನೆ ಭಾನುವಾರ ಸಂಜೆ ಕೂಡ್ಲಿಗಿ ತಾಲೂಕಿನ ನಿಡಗುರ್ತಿಯಲ್ಲಿ ನಡೆದಿದೆ. ತಾಲೂಕಿನ ನಿಡಗುರ್ತಿ ಗ್ರಾಮ ಪಂಚಾಯ್ತಿ ಸಮೀಪದಲ್ಲಿ ಶಬ್ಬೀರ್ ಎನ್ನುವಾತ ಶೆಡ್‌ನಲ್ಲಿ ಅನಧಿಕೃತವಾಗಿ ಮದ್ಯದ ಬಾಟಲಿಗಳನ್ನು ಇಟ್ಟು ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ, ಬಂಧಿಸಿದ್ದಾರೆ. ಈ ಬಗ್ಗೆ ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಭರಣ ಕಳ್ಳತನ
ಬಳ್ಳಾರಿ: ನಕಲಿ ಕೀ ಬಳಸಿ ಮನೆಯಲ್ಲಿದ್ದ ರು. 76 ಸಾವಿರ ಮೌಲ್ಯದ ಬಂಗಾರ ಆಭರಣ ಹಾಗೂ ನಗದನ್ನು ಕಳ್ಳತನ ಮಾಡಿರುವ ಘಟನೆ ಕೊಳಗಲ್ ರಸ್ತೆಯ ಎಂ.ಕೆ. ನಗರದಲ್ಲಿ ನಡೆದಿದೆ. ಎಂ.ಕೆ. ನಗರದ ನಿವಾಸಿ ಜೇಮ್ಸ್ ಅವರು ಊರಿಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಕೌಲ್‌ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.