ಬಳ್ಳಾರಿ: ಇಂದು ದಾನಿಗಳ ಸಂಸ್ಮರಣೆ ದಿನಾಚರಣೆ
ಬಳ್ಳಾರಿ: ಸ್ಥಳೀಯ ಶೆಟ್ರ ಗುರುಶಾಂತಪ್ಪ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಡಿ. 10ರಂದು ದಾನಿಗಳ ಸಂಸ್ಮರಣಾ ದಿನ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ದಿನಾಚರಣೆ ಕಾರ್ಯಕ್ರಮ ಜರುಗಲಿದೆ.
ಬೆಳಗ್ಗೆ 9ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಕರ್ಚಿಗನೂರಿನ ಚರಣಗಿರಿ ಸಂಸ್ಥಾನಮಠದ ಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ತುಮಕೂರು ಜಿಲ್ಲಾ ನ್ಯಾಯಾಧೀಶ ಎಚ್. ರಾಮು, ಡಿಡಿಪಿಐ ವೀರಣ್ಣ ಎಸ್. ಜತ್ತಿ ಪಾಲ್ಗೊಳ್ಳುವರು. ವೀವಿ ಸಂಘದ ಉಪಾಧ್ಯಕ್ಷ ಕೆ.ಎಂ. ಮಹೇಶ್ವರಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ನಂತರ ಸಂಜೆ 5.30ಕ್ಕೆ ವಿದ್ಯಾರ್ಥಿಗಳ ಪ್ರತಿಭಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಹರಪ್ಪನಹಳ್ಳಿ ಶಾಸಕ ಎಂ.ಪಿ. ರವೀಂದ್ರ, ಡಿಡಿಪಿಯು ಅಬ್ದುಲ್ ರಷೀದ್ ಪಾಲ್ಗೊಳ್ಳುವರು. ವೀವಿ ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕಾಲೇಜಿನ ಹಳೆ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.