ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಒಡೆಯರ್‌ಗೆ ಶ್ರದ್ಧಾಂಜಲಿ

Lingaraj Badiger
Updated On : 13 Dec 2013, 10:48 am

ಬಳ್ಳಾರಿ: ಮೈಸೂರು ಮಹಾರಾಜ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ನಿಧನರಾದ ನಿಮಿತ್ತ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಲ್ಲಿ ಮೌನಾಚರಣೆ ಮಾಡಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.
ವಿವಿಯ ಎಲ್ಲ ಅಧ್ಯಾಪಕರು, ಅಧ್ಯಾಪಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಶ್ರದ್ಧಾಂಜಲಿ ಅರ್ಪಿಸಿದರು. ಪರೀಕ್ಷಾಂಗ ಕುಲಸಚಿವ ಪ್ರೊ. ಎಲ್.ಆರ್. ನಾಯಕ್, ಸಮಾಜ ವಿಜ್ಞಾನ ನಿಕಾಯದ ಡೀನ್ ಪ್ರೊ. ಜೆ. ಸೋಮಶೇಖರ್, ಆಂಗ್ಲ ವಿಭಾಗದ ಡಾ. ಶಾಂತಾ ನಾಯಕ್ ಅವರು ಒಡೆಯರ್ ಅವರ ಬಗ್ಗೆ ಮಾತನಾಡಿದರು. ಸಮಾಜಶಾಸ್ತ್ರ ವಿಭಾಗದ ಡಾ. ರಾಜೇಂದ್ರಪ್ರಸಾದ್ ಎನ್.ಎಲ್., ಸಾರ್ವಜನಿಕ ಸಂಪರ್ಕ ಅಧಿಕಾರಿ ಎಸ್. ಸುನೀಲ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement