ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಸುದ್ದಿ ಸಂಕ್ಷೇಪ

Mainashree
Updated On : 14 Dec 2013, 10:17 am

ಆಂಜನೇಯಸ್ವಾಮಿ ಕಾರ್ತಿಕೋತ್ಸವ ಇಂದು
ಹಗರಿಬೊಮ್ಮನಹಳ್ಳಿ: ಪಟ್ಟಣದ ರಾಮನಗರದ ಗುರುಭವನ ಹತ್ತಿರದ ಶ್ರೀ ಆಂಜನೇಯಸ್ವಾಮಿ ಕಾರ್ತಿಕೋತ್ಸವ ಡಿ. 14ರಂದು ಸಂಜೆ ಅದ್ಧೂರಿಯಾಗಿ ಜರುಗಲಿದೆ. ಕಾರ್ಯಕ್ರಮದ ನಿಮಿತ್ತ ಸಹಸ್ರಾರು ದೀಪೋತ್ಸವ ಹಾಗೂ ಪಲ್ಲಕ್ಕಿ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ದೈವಸ್ಥರು ತಿಳಿಸಿದ್ದಾರೆ. ಮುಂಜಾನೆ ಸ್ವಾಮಿಗೆ ವಿಶೇಷ ಅಲಂಕೃತ ಪೂಜೆ ನೇರವೇರಲಿದೆ. ಸಂಜೆಯಿಂದ ಕಾರ್ತಿಕೋತ್ಸವ ಕಾರ್ಯಕ್ರಮ ಆರಂಭವಾಗಲಿದೆ. ಸಂಜೆ 6 ಗಂಟೆಗೆ ದೇವಸ್ಥಾನದಿಂದ ಪಲ್ಲಕ್ಕಿ ಉತ್ಸವ ಆರಂಭವಾಗಿ ಪ್ರಮುಖ ಬೀದಿಗಳ ಮೂಲಕ ಸರ್ಕಾರಿ ಶಾಲೆಯ ಹತ್ತಿರದ ಬನ್ನಿಮಹಾಂಕಾಳಿ ದೇವಸ್ಥಾನಕ್ಕೆ ತಲುಪಿ, ಅಲ್ಲಿಂದ ಪುನಃ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಬಂದು ತಲುಪಲಿದೆ. ಅನಂತರ ದೇವಸ್ಥಾನದ ಆವರಣ ಸೇರಿದಂತೆ ಪ್ರಮುಖ ರಸ್ತೆಗಳ ಎಡಬಲಕ್ಕೆ ಸಾಲು, ಸಾಲು ದೀಪಗಳ ದೀಪೋತ್ಸವ ಕಾರ್ಯಕ್ರಮ ಜರುಗಲಿದೆ. ಅನಂತರ ಬಾಣಬಿರುಸು ಪ್ರದರ್ಶನವಿರುತ್ತದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೈವಸ್ಥರು ಮನವಿ ಮಾಡಿದ್ದಾರೆ.
ಕೊಟ್ಟೂರು ದೇವಸ್ಥಾನ: 16ರಂದು ಕಾರ್ತಿಕೋತ್ಸವ
ಬಳ್ಳಾರಿ:  ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶ್ರೀ ಕ್ಷೇತ್ರ ಕೊಟ್ಟೂರು ಗುರು ಬಸವೇಶ್ವರ ಸ್ವಾಮಿ ದೇವಸ್ಥಾನದ ಕಾರ್ತಿಕೋತ್ಸವ ಹಾಗೂ ಬೆಳ್ಳಿ ರಥೋತ್ಸವ ಡಿ. 16ರಂದು ವಿಜೃಂಭಣೆಯಿಂದ ಜರುಗಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಗುರುಬಸವೇಶ್ವರಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅ. ಸುತಗುಂಡಿ ಮನವಿ ಮಾಡಿದ್ದಾರೆ. ಭಕ್ತಾಧಿಗಳು ತೊಡಗಿಸುವ ಶಾಶ್ವತ ಠೇವಣಿ ಮೇಲೆ ಬರುವ ಬಡ್ಡಿಯಿಂದ ನಿತ್ಯ ರುದ್ರಾಭಿಷೇಕ ಪೂಜೆಯ ವ್ಯವಸ್ಥೆ ಕಲ್ಪಿಸಲಾಗಿದೆ. ಇದಕ್ಕೆ ರು. 2001 ಠೇವಣಿ ತೊಡಗಿಸಿ ಭಕ್ತಾದಿಗಳು ಸ್ವಾಮಿ ಕೃಪೆಗೆ ಪಾತ್ರರಾಗಬೇಕು. ದೇವಸ್ಥಾನಕ್ಕೆ ಸಲ್ಲಿಸುವ ಮುಡುಪು, ಕಾಣಿಕೆಗಳನ್ನು ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸಿ ರಶೀದಿ ಪಡೆಯಬೇಕು. ರಶೀದಿ ಪಡೆಯದೆ ಕೊಡುವ ಕಾಣಿಕೆಗಳು ಶ್ರೀ ಸ್ವಾಮಿಯ ಭಂಡಾರಕ್ಕೆ ಸೇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿದ್ದಾರೆ.
ಇಂದು ಶೈಕ್ಷಣಿಕ ಸಮಾವೇಶ
ಬಳ್ಳಾರಿ:  ಸ್ಥಳೀಯ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಡಿ. 14ರಂದು ಬೆಳಗ್ಗೆ 10.30ಕ್ಕೆ 21ನೇ ರಾಜ್ಯಮಟ್ಟದ ಶೈಕ್ಷಣಿಕ ಸಮಾವೇಶ ಮತ್ತು ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕರ ವೇದಿಕೆಯ ಜಿಲ್ಲಾ ಘಟಕ ಕಾರ್ಯಕ್ರಮ ಏರ್ಪಡಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಅನಿಲ್ ಲಾಡ್ ರಾಜ್ಯ-ರಾಷ್ಟ್ರ ಪ್ರಶಸ್ತಿ ಶಿಕ್ಷಕರ ಪುಸ್ತಕ ಬಿಡುಗಡೆ ಮಾಡುವರು. ಮಾಜಿ ಶಾಸಕ ಎಂ.ಪಿ. ರವೀಂದ್ರ, ಮಾಜಿ ಸಂಸದ ಕೆ.ಸಿ. ಕೊಂಡಯ್ಯ, ಕೋಳೂರು ಬಸವನಗೌಡ, ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement