ಪಿಬಿಸಿ ಸೇವಾ ಕೇಂದ್ರ ಸ್ಥಗಿತ
ಬಳ್ಳಾರಿ: ಮಹಾನಗರ ಪಾಲಿಕೆ ವ್ಯಾಪ್ತಿಯ 38 ಖಾಸಗಿ ಫೋಟೋ ಬಯೋವುಟ್ರಿಕ್ ಸೇವಾ ಕೇಂದ್ರಗಳನ್ನು ಸ್ಥಗಿತಗೊಳಿಸಲಾಗಿದೆ. ಹೊಸ ಪಡಿತರ ಚೀಟಿಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕಾರ್ಯನಿರ್ವಹಿಸುತ್ತಿದ್ದ 38 ಕೇಂದ್ರಗಳನ್ನು ಇಲಾಖೆ ಆಯುಕ್ತರ ಆದೇಶದಂತೆ ಸ್ಥಗಿತಗೊಳಿಸಲಾಗಿದೆ. ಪಾಲಿಕೆ ಮತ್ತು ಬುಡಾ ಕಾಂಪ್ಲೆಕ್ಸ್ನಲ್ಲಿರುವ ಬಳ್ಳಾರಿ ಒನ್ ಕೇಂದ್ರಗಳು ಮಾತ್ರ ಕಾರ್ಯನಿರ್ವಹಿಸಲಿದ್ದು, ಪಡಿತರ ಚೀಟಿಗೆ ಸಂಬಂಧಿಸಿದ ಅರ್ಜಿಯನ್ನು ಇಲ್ಲಿ ಸಲ್ಲಿಸಬಹುದು ಎಂದು ಆಹಾರ ಇಲಾಖೆಯ ಮಂಟೇಸ್ವಾಮಿ ತಿಳಿಸಿದ್ದಾರೆ.