ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಪಡಿತರ ಚೀಟಿ ವಿಳಂಬ: ಸೂಕ್ತ ಕ್ರಮಕ್ಕೆ ಒತ್ತಾಯ

Mainashree
Updated On : 23 Dec 2013, 10:51 am

ಬಳ್ಳಾರಿ: ಪಡಿತರ ಚೀಟಿಗಾಗಿ ಭಾವಚಿತ್ರ ತೆಗೆಸಿ ಆರು ತಿಂಗಳು ಕಳೆದರೂ ಪಡಿತರ ಚೀಟಿ ನೀಡುವಲ್ಲಿ ವಿಳಂಬವಾಗುತ್ತಿದ್ದು, ಇದರಿಂದ ಬಡ ಜನತೆಗೆ ತೊಂದರೆಯಾಗುತ್ತಿದೆ. ಕೂಡಲೆ ಪಡಿತರ ಚೀಟಿ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಬಾಬು ಜಗಜೀವನ್ ರಾಮ್ ಜನ ಜಾಗೃತಿ ವೇದಿಕೆ ಜಿಲ್ಲಾ ಘಟಕ ಆಗ್ರಹಿಸಿದೆ. ವೇದಿಕೆ ಜಿಲ್ಲಾ ಪದಾಧಿಕಾರಿಗಳು ಜಿಲ್ಲಾಧಿಕಾರಿ ಮೂಲಕ ಆಹಾರ ಮತ್ತು ನಾಗರಿಕರ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಬಳ್ಳಾರಿ ಜಿಲ್ಲೆಯ ಎಲ್ಲ ಗ್ರಾಪಂ ವ್ಯಾಪ್ತಿಗಳಲ್ಲಿ ಮತ್ತು ನಗರದ ಸೈಬರ್ ಕೇಂದ್ರಗಳಲ್ಲಿ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿ ಭಾವಚಿತ್ರ ತೆಗೆಸಿಕೊಂಡು ಆರು ತಿಂಗಳಾದರೂ ಪಡಿತರ ಚೀಟಿ ಫಲಾನುಭವಿಗಳಿಗೆ ದೊರಕುತ್ತಿಲ್ಲ. ಇದರಿಂದ ಬಡ ಜನತೆಗೆ ಅನ್ನಭಾಗ್ಯ ಯೋಜನೆ ಲಾಭ ದೊರೆಯುತ್ತಿಲ್ಲ. ಕಡುಬಡವರು ಪಡಿತರ ಚೀಟಿಗಾಗಿ ದಿನನಿತ್ಯ ಅಲೆಯುವಂತಾಗಿದೆ. ಆದರೆ ಈ ಬಗ್ಗೆ ಯಾವುದೆ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಗಮನಹರಿಸುತ್ತಿಲ್ಲ. ಆದ್ದರಿಂದ ಶೀಘ್ರವೆ ಪಡಿತರ ಚೀಟಿ ವಿತರಣೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ವೇದಿಕೆಯ ಜಿಲ್ಲಾಧ್ಯಕ್ಷ ಜೆ. ಸುಂಕಣ್ಣ, ರಾಜ್ಯಾಧ್ಯಕ್ಷ ಟಿ. ಪಂಪಾಪತಿ, ಜಿಲ್ಲಾ ಉಪಾಧ್ಯಕ್ಷ ರಾಮಚಂದ್ರಪ್ಪ, ಎಚ್.ಎಸ್. ಗಾದಿಲಿಂಗಪ್ಪ, ಎಚ್. ಕೆಂಚಪ್ಪ, ಶ್ರೀನಿವಾಸ, ಎಚ್. ಭೀಮಲಿಂಗಪ್ಪ, ಬಿ.ಎಸ್. ಗಂಗಾಧರ, ಆರ್. ಗೂಳಪ್ಪ, ಎಚ್. ಶಂಕ್ರಪ್ಪ, ಎಚ್. ಈರಣ್ಣ, ಎಚ್. ವೀರೇಶ್, ವೈ. ಅರುಣಾಚಲಂ, ಎಚ್. ಹುಲುಗಪ್ಪ ಸೇರಿದಂತೆ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement