ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ತರಬೇತಿ ಸದುಪಯೋಗಪಡಿಸಿಕೊಳ್ಳಿ: ಬಂಕದ್

Mainashree
Updated On : 24 Dec 2013, 10:50 am

ಬಳ್ಳಾರಿ: ಶಿಬಿರದಲ್ಲಿ ಪಡೆದ ತರಬೇತಿಯನ್ನು ಸದುಪಯೋಗ ಪಡಿಸಿಕೊಂಡು ಸ್ವಾವಲಂಬಿ ಜೀವನ ನಡೆಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೋಮಶೇಖರ್ ಬಂಕದ್ ಹೇಳಿದರು.
ಜಿಲ್ಲಾ ಕೈಗಾರಿಕಾ ಕೇಂದ್ರ, ಬಳ್ಳಾರಿ, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಬಳ್ಳಾರಿ ಮತ್ತು ಖಾದಿ ಗ್ರಾಮೋದ್ಯೋಗ ನಿಗಮ, ಬೆಂಗಳೂರು ಇವರ ವತಿಯಿಂದ ಬಳ್ಳಾರಿಯ ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಆಯೋಜಿಸಿದ್ದ 10 ದಿನಗಳ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆ ಅಡಿ ಉದ್ಯಮಶೀಲತೆ ಅಭಿವೃದ್ಧಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತರಬೇತಿಯಲ್ಲಿ ತಿಳಿಸಿದ ಉದ್ಯಮಶೀಲತೆ, ಅಭಿವೃದ್ಧಿ ಕೌಶಲ್ಯಗಳನ್ನು ಎಲ್ಲ ಶಿಬಿರಾರ್ಥಿಗಳು ತಮ್ಮ ಉದ್ದಿಮೆ ನಡೆಸುವಲ್ಲಿ ಸದ್ವಿನಿಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ತಿಳಿಸಿದರು.
ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿ ನಜೀರ್ ಅಹಮ್ಮದ್ ಮಾತನಾಡಿ, ಪಿಎಂಇಜಿಪಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಪರಂಜ್ಯೋತಿ ತರಬೇತಿಯ ಕುರಿತು ತಮ್ಮ ಅನಿಸಿಕೆಗಳನ್ನು ತಿಳಿಸಿದರು. ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ನಿರ್ದೇಶಕ ಫಕ್ಕಿರೇಶ ಬಾಳಿಕಾಯಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಕೈಗಾರಿಕಾ ಉತ್ತೇಜನ ಅಧಿಕಾರಿ ಸಿ.ಕೆ. ನಾಗರಾಜ್, ಸ್ಥಳೀಯ ವೀರಶೈವ ಎಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ವೀರೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಉಪನ್ಯಾಸಕ ಎಚ್.ಪಿ ಕಲ್ಲೇಶ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement