ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ರೈತರಿಗೆ ಸಂಘಗಳು ಸಹಕಾರಿಯಾಗಲಿ

Mainashree
Updated On : 24 Dec 2013, 10:49 am

ಕನ್ನಡಪ್ರಭ ವಾರ್ತೆ, ಹೊಸಪೇಟೆ, ಡಿ. 23
ಕೃಷಿ ಪತ್ತಿನ ಸಹಕಾರ ಸಂಘಗಳು ರೈತರಿಗೆ ಹಾಗೂ ಜನಸಾಮಾನ್ಯರಿಗೆ ಉಪಯುಕ್ತವಾಗುವ ರೀತಿಯಲ್ಲಿ ಕಾರ್ಯನಿರ್ವಹಿಸಲು ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಹೇಳಿದರು.
ಅವರು ತಾಲೂಕಿನ ಬೈಲುವದ್ದಿಗೇರಿ ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಮಾತನಾಡಿ, ಬೈಲುವದ್ದಿಗೇರಿ ಕೃಷಿ ಪತ್ತಿನ ಸಹಕಾರ ಸಂಘ ಸಹಕಾರ ಕ್ಷೇತ್ರದಲ್ಲಿ ಶೇ. 100ರಷ್ಟು ಉತ್ತಮ ಸಾಧನೆ ಮಾಡಿ ಆದರ್ಶ ಸಹಕಾರಿ ಸಂಘವಾಗಿದೆ. 1959ರಿಂದಲೂ ಈ ಬ್ಯಾಂಕ್‌ನಲ್ಲಿ ಅಧ್ಯಕ್ಷರ ಚುನಾವಣೆ ಜಾತ್ಯತೀತ, ಅವಿರೋಧವಾಗಿ ಆಯ್ಕೆ ಮಾಡುತ್ತಾ ಬಂದಿರುವುದು ಇತರೆ ಸಹಕಾರಿ ಸಂಘಗಳಿಗೆ ಮಾದರಿಯಾಗಿದೆ. ಸ್ತ್ರೀ ಶಕ್ತಿ ಗುಂಪಿನವರಿಗೆ ವಿಶೇಷ ಕಾಳಜಿ ವಹಿಸಿ ಅನೇಕ ಗುಂಪುಗಳ ರಚನೆಗೆ ಮುಂದಾಗಿರುವುದು ಶ್ಲಾಘನೀಯ ಎಂದರು.
ಬಿಡಿಡಿಸಿ ಬ್ಯಾಂಕ್ ಅಧ್ಯಕ್ಷ, ಶಾಸಕ ಎಂ.ಪಿ. ರವೀಂದ್ರ ಮಾತನಾಡಿ, ಸಹಕಾರಿ ಕ್ಷೇತ್ರದಲ್ಲಿ ಹೈನುಗಾರಿಕೆಗೆ ಮತ್ತು ಕುಲಕರ್ಮಿಗಳಿಗೆ ವಿಶೇಷ ಸೌಲಭ್ಯ ಒದಗಿಸಿಕೊಡುವುದು. ಸ್ತ್ರೀಶಕ್ತಿ ಗುಂಪಿನ ಮಹಿಳೆಯರಿಗೆ ಸ್ವಾವಲಂಬಿ ಜೀವನ ಸಾಗಿಸಲು ವಿವಿಧ ತರಬೇತಿ ಕೇಂದ್ರಗಳನ್ನು ಹಮ್ಮಿಕೊಳ್ಳುವ ಜತೆಗೆ ಮಹಿಳೆಯನ್ನು ಸ್ವಾವಲಂಬಿಗಳಾಗಿ ಆರ್ಥಿಕ ಅಭಿವೃದ್ಧಿ ಹೊಂದಲು ಅನೇಕ ಯೋಜನೆಗಳನ್ನು ರೂಪಿಸಿದೆ. ಹೈನುಗಾರಿಕೆಗೆ ವಿಶೇಷ ಸೌಲಭ್ಯಗಳನ್ನು ನೀಡುವ ಮೂಲಕ ರೈತರನ್ನು ಪ್ರೋತ್ಸಾಹಿಸಲಾಗುತ್ತದೆ ಎಂದು ಹೇಳಿದರು.
ಮರಿಯಮ್ಮನಹಳ್ಳಿಯ ಗುರುಪಾದದೇವರ ಮಠದ ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಜಿಪಂ ಅಧ್ಯಕ್ಷೆ ಶೋಭಾ ಬೆಂಡಗೇರಿ, ಉಪಾಧ್ಯಕ್ಷೆ ಮಮತಾ ಸುರೇಶ್, ಸದಸ್ಯ ಅನ್ನದಾನರೆಡ್ಡಿ, ಶರಣಪ್ಪ, ವಸಂತ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಜೆ.ಎಂ. ವೃಷಭೇಂದ್ರಯ್ಯ, ಚಂದ್ರಶೇಖರ್, ತಾಪಂ ಸದಸ್ಯ ಕೋರಿ ಫಕ್ಕೀರಪ್ಪ, ಸ್ಥಳೀಯ ಗ್ರಾಪಂ ಅಧ್ಯಕ್ಷೆ ನಾಗವೇಣಿ, ಉಪಾಧ್ಯಕ್ಷ ರಾಮಕೃಷ್ಣ, ಬಿಡಿಸಿಸಿ ಬ್ಯಾಂಕ್ ಸಿಇಒ ಜಿ. ಕುಬೇರಪ್ಪ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್. ವಿರೂಪಾಕ್ಷಗೌಡ, ಸ್ಥಳೀಯ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ. ರೇವಯ್ಯಸ್ವಾಮಿ, ಎಪಿಎಂಸಿ ಸದಸ್ಯ ಎಂ. ಗೋವಿಂದರೆಡ್ಡಿ, ಸಂಗಪ್ಪ, ಜಡೆಪ್ಪ, ಮಲ್ಲನಗೌಡ, ಕೆ. ಈರಣ್ಣ, ವೈ. ಮಲ್ಲಪ್ಪ, ಶಂಕ್ರಪ್ಪ, ಬಸವನಗೌಡ, ಗಂಗಾಧರಪ್ಪ, ಸಿದ್ದಪ್ಪ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement