ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಸುದ್ದಿ ಸಂಕ್ಷೇಪ

Mainashree
Updated On : 24 Dec 2013, 10:51 am

ವಿದ್ಯಾರ್ಥಿನಿ ಮೇಲೆ ಹಲ್ಲೆ: ಸೂಕ್ತ ತನಿಖೆಗೆ ಒತ್ತಾಯ
ಬಳ್ಳಾರಿ: ದ್ವಿತೀಯ ಪಿಯು ವಿದ್ಯಾರ್ಥಿನಿ ಮತ್ತು ಅವರ ಕುಟುಂಬದವರ ಮೇಲೆ ನಡೆದ ಹಲ್ಲೆ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಸಮಿತಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು. ನಗರದ ಕೋಟೆ ಪ್ರದೇಶದಲ್ಲಿ ವಾಸಿಸುತ್ತಿದ್ದ ವಿದ್ಯಾರ್ಥಿನಿ ಶ್ರೀಲಕ್ಷ್ಮೀ ಕುಟುಂಬದ ಮೇಲೆ ವೇಶ್ಯಾವಾಟಿಕೆ ಆರೋಪದ ಹೊರಿಸಿದ ರಾಯಚೂರು ಸಂಸದ ಸಣ್ಣಫಕ್ಕೀರಪ್ಪ ಪುತ್ರ ಮುತ್ತು ಮತ್ತು ಆತನ ಪುಂಡರ ಗುಂಪೊಂದು ಮನೆಗೆ ನುಗ್ಗಿ, ವಿದ್ಯಾರ್ಥಿನಿ ಹಾಗೂ ಆಕೆಯ ತಾಯಿ, ಸ್ನೇಹಿತನ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಿರುವುದು ಖಂಡನೀಯ. ಮುತ್ತು ಸೇರಿದಂತೆ ಇತರೆ ಆರೋಪಿಗಳ ಮೇಲೆ ಕಠಿಣ ಕ್ರಮ ಜರುಗಿಸಬೇಕು. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಮನವಿಯಲ್ಲಿ ಸಂಘಟನೆಯು ಒತ್ತಾಯಿಸಿದೆ. ಸೂಕ್ತ ರೀತಿ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದಲ್ಲಿ ಜನವಾದಿ ಮಹಿಳಾ ಸಂಘಟನೆಯಿಂದ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದೆ. ಸಂಘಟನೆ ಜಿಲ್ಲಾ ಸಮಿತಿ ಕಾರ್ಯದರ್ಶಿ ಜೆ. ಚಂದ್ರಕುಮಾರಿ, ಸರಸ್ವತಿ, ಮಾಹುತಮ್ಮ, ಸುಜಾತಾ, ಪದ್ಮಾವತಿ, ಕೆ. ಗೌರಮ್ಮ, ಜಾನಕಿ, ಶೋಭಾ, ಲಕ್ಷ್ಮೀ, ಪದ್ಮಾವತಿ, ಪಾರ್ವತಿ ಸೇರಿದಂತೆ ಮತ್ತಿತರರು ಇದ್ದರು.
ಏಡ್ಸ್ ಜನಜಾಗೃತಿ
ಬಳ್ಳಾರಿ: ಏಡ್ಸ್ ಮುಕ್ತ ಭಾರತವನ್ನಾಗಿಸಲು ಯುವಕರು ಜಾಗ್ರತರಾಗಿ ಮಾರಕ ರೋಗ ಏಡ್ಸ್ ಬಗ್ಗೆ ಸಾರ್ವಜನಿಕರಲ್ಲಿ ಮಾಹಿತಿ ನೀಡುವ ಮೂಲಕ ಭವಿಷ್ಯದಲ್ಲಾಗುವ ತೊಂದರೆಯಿಂದ ರಕ್ಷಿಸಬೇಕೆಂದು ಎಸ್‌ಯುಜೆಎಸ್ ಪಿಯು ಕಾಲೇಜು ಪ್ರಾಚಾರ್ಯ ಜನಪಾಲ ಪ್ರಸಾದರೆಡ್ಡಿ ತಿಳಿಸಿದರು. ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಎಸ್‌ಯುಜೆಎಸ್ ಕಾಲೇಜು, ರೆಡ್‌ರಿಬ್ಬನ್ ಕ್ಲಬ್ ಆಶ್ರಯದಲ್ಲಿ ನಗರದ ಗುಗ್ಗರಹಟ್ಟಿ ಪ್ರದೇಶದ ಉ.ಜ.ಸಿ. ಪಪೂ ಕಾಲೇಜಿನಲ್ಲಿ ಆಯೋಜಿಸಿದ್ದ ಏಡ್ಸ್ ಜಾಗೃತಿ ಜಾಥಾ, ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಪ್ರತಿಯೊಬ್ಬರೂ ಏಡ್ಸ್ ರೋಗದ ಬಗ್ಗೆ ಜಾಗೃತಿ ವಹಿಸುವುದು ಅತ್ಯಗತ್ಯ ಎಂದರು.ನಗರದ ಗುಗ್ಗರಹಟ್ಟಿ ಪ್ರದೇಶದ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಾಹಕ ಘಟಕದ ಜಿಲ್ಲಾ ಕಾರ್ಯಕ್ರಮಾಧಿಕಾರಿ ನರಸಿಂಹಮೂರ್ತಿ, ಸಿಬ್ಬಂದಿ ಗಿರೀಶ್ ಅವರು ಎಚ್‌ಐವಿ ಏಡ್ಸ್ ರೋಗದ ಬಗ್ಗೆ ಮಾಹಿತಿ ನೀಡುವ ಭಿತ್ತಿಪತ್ರಗಳು, ಪೋಸ್ಟರ್‌ಗಳನ್ನು ಪ್ರದರ್ಶಿಸಿ ಮಾಹಿತಿ ನೀಡುವ ಮೂಲಕ ವಿದ್ಯಾರ್ಥಿ, ಯುವಕರು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ನಂತರ ಕಾಲೇಜು ವಿದ್ಯಾರ್ಥಿಗಳ ಜಾಗೃತಿ ಜಾಥಾ ಗುಗ್ಗರಹಟ್ಟಿಯ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಏಡ್ಸ್ ಕುರಿತು ಅರಿವು ಮೂಡಿಸಿತು. ಉಪನ್ಯಾಸಕರಾದ ಪಾರ್ವತಿ ಕೊಳ್ಳಿ, ಶ್ರೀಶೈಲ, ಕೆ.ಎಂ. ಚನ್ನಬಸವಯ್ಯ, ಹೊಂಬಾಳ್, ಶಾಂತಪ್ಪ, ಶಿಕ್ಷಕ ಹಿರೇಮಠ್, ಎನ್‌ಎಸ್‌ಎಸ್ ಅಧಿಕಾರಿ ಜೆ. ಮಹೇಶ್, ಪುರುಷೋತ್ತಮ, ಕಾಲೇಜು ಸಿಬ್ಬಂದಿಗಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement