ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಪೋಷಕಾಂಶಯುಕ್ತ ಆಹಾರ ಸೇವಿಸಿ

Vishwanath S
Updated On : 25 Dec 2013, 12:42 pm

ಬಳ್ಳಾರಿ: ಉತ್ತಮ ಪೋಷಕಾಂಶಯುಕ್ತ ಆಹಾರ ಸೇವನೆಯಿಂದ ಹದಿಹರೆಯದ ಮತ್ತು ಗರ್ಭಿಣಿ ಸ್ತ್ರೀಯರಲ್ಲಿ ಅಪೌಷ್ಟಿಕತೆ ಹೋಗಲಾಡಿಸಬಹುದು ಎಂದು ತಾಲೂಕು ವೈದ್ಯಾಧಿಕಾರಿ ಡಿ. ವೆಂಕಟೇಶಮೂರ್ತಿ ತಿಳಿಸಿದರು.
ತಾಲೂಕಿನ ಚೇಳ್ಳಗುರ್ಕಿ ಗ್ರಾಮದ ಸರ್ಕಾರಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಕ್ರಿಯಾಶೀಲ ಶಿಕ್ಷಕರ ವೇದಿಕೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಚೇಳ್ಳಗುರ್ಕಿ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಾಲಗಂಗಾಧರ ತಿಲಕ್ ಅವರ 157ನೇ ಜಯಂತಿ ಹಾಗೂ ಅಪೌಷ್ಟಿಕತೆ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗುಣಮಟ್ಟದ ಆಹಾರ ಕೊರತೆಯಿಂದ ಗರ್ಭಾವಸ್ಥೆಯಲ್ಲಿ ಮಗುವಿನ ದೇಹ, ಮೆದುಳು ಸರಿಯಾದ ರೀತಿಯಲ್ಲಿ ಬೆಳವಣಿಗೆಯಾಗದೇ ಮಾನಸಿಕ ಅಸ್ವಸ್ಥರಾಗುತ್ತಾರೆ. ಆದ್ದರಿಂದ ಪೋಷಕಾಂಶಯುಕ್ತ ಆಹಾರ ಸೇವನೆ ಅತ್ಯಗತ್ಯ. ಗರ್ಭಿಣಿಯರು ಹೆರಿಗೆಯನ್ನು ಕಡ್ಡಾಯವಾಗಿ ಆಸ್ಪತ್ರೆಗಳಲ್ಲಿ ಮಾಡಿಸುವುದರಿಂದ ತಾಯಿ ಮತ್ತು ಮಗುವಿನ ಆರೋಗ್ಯವನ್ನು ಸುರಕ್ಷಿತವಾಗಿಡಬಹುದು ಎಂದರು.
ಚೇಳ್ಳಗುರ್ಕಿ ಗ್ರಾಪಂ ಉಪಾಧ್ಯಕ್ಷ ಸಿ. ಮರೇಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಕ್ರಿಯಾಶೀಲ ಶಿಕ್ಷಕರ ವೇದಿಕೆ ಜಿಲ್ಲಾಧ್ಯಕ್ಷ ರವಿ ಚೇಳ್ಳಗುರ್ಕಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ಕ್ರಿಯಾಶೀಲ ಶಿಕ್ಷಕರ ವೇದಿಕೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ತಾಲೂಕು ವೈದ್ಯಾಧಿಕಾರಿಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಚೇಳ್ಳಗುರ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಕೆ. ಪ್ರಹ್ಲಾದ್, ವಸತಿ ನಿಲಯದ ಪಾಲಕ ಗಣೇಶ್, ಗ್ರಾಪಂ ಸದಸ್ಯ ದೊಡ್ಡಯ್ಯ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯಗುರು ನಾಗಪ್ಪ, ಹಾಸ್ಟೆಲ್ ನೌಕರ ನಾರಾಯಣಪ್ಪ, ಆಶಾ ಕಾರ್ಯಕರ್ತೆ ಲಕ್ಷ್ಮೀ ದೇವಿ, ಸೇರಿದಂತೆ ಗ್ರಾಮದ ಮುಖಂಡರು, ಗರ್ಭಿಣಿಯರು, ಮಕ್ಕಳು ಉಪಸ್ಥಿತರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement