ಮಕ್ಕಳ ಪ್ರತಿಭೆ ಪ್ರೋತ್ಸಾಹಿಸಿ
ಬಳ್ಳಾರಿ: ಪ್ರತಿಯೊಬ್ಬರು ಶಿಕ್ಷಣದತ್ತ ಹೆಚ್ಚಿನ ಒಲವು ತೋರಿಸುವುದರ ಜತೆಗೆ ತಮ್ಮ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಪ್ರೋತ್ಸಾಹಿಸಿ, ಬೆಳೆಸಬೇಕು ಎಂದು ಬಳ್ಳಾರಿ ನಗರ ಶಾಸಕ ಅನಿಲ್ ಎಚ್. ಲಾಡ್ ಹೇಳಿದರು.
ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ, ನಗರದ ವಾರ್ಡ್ಲಾ ಸಂಯುಕ್ತ ಪದವಿಪೂರ್ವ ಕಾಲೇಜಿನ ಅವರಣದಲ್ಲಿ ಸೋಮವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಜಿಪಂ ಅಧ್ಯಕ್ಷೆ ಶೋಭಾ ಬೆಂಡಗೇರಿ ಮಾತನಾಡಿ, ಶಿಕ್ಷಣ ಇಲಾಖೆ ಪಾಠ ಪ್ರವಚನ ಜತೆಯಲ್ಲಿ ಇಂತಹ ಕಾರ್ಯಕ್ರಮಗಳಲ್ಲಿ ಆಯೋಜಿಸುವ ಮೂಲಕ ಮಕ್ಕಳಲ್ಲಿನ ಪ್ರತಿಭೆ ಹೊರತರುತ್ತಿದೆ ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ವೀರಣ್ಣ ಜತ್ತಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ಪರ್ಧೆಯನ್ನು ನಾಲ್ಕು ವೇದಿಕೆಗಳಲ್ಲಿ ನಡೆಸುತ್ತಿದ್ದು, 300ಕ್ಕೂ ಅಧಿಕ ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ ಎಂದರು.
ಜಿಪಂ ಉಪಾಧ್ಯಕ್ಷೆ ಮಮತಾ ಸುರೇಶ್ ಚಿನುಮಳ್ಳಿ, ತಾಪಂ ಅಧ್ಯಕ್ಷ ಗಾದಿಲಿಂಗಪ್ಪ, ಮಹಾನಗರ ಪಾಲಿಕೆ ಸದಸ್ಯರಾದ ಬೆಣಕಲ್ಲು ಬಸವರಾಜ್, ಪರ್ವೀನ್ ಬಾನು, ಕರ್ನಾಟಕ ರಾಜ್ಯ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶಪ್ಪ, ಶಿಕ್ಷಕರ ಸಂಘದ ಆನಂದ ನಾಯ್ಕ, ಲಿಂಗಪ್ಪ, ಹನುಮಂತಪ್ಪ, ವಾರ್ಡ್ಲಾ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ವಿಕ್ಟರ್, ಉಪ ಪ್ರಾಚಾರ್ಯೆ ಸುಪ್ರಭಾ, ಬಿಇಓಗಳಾದ ವೃಷಭೇಂದ್ರಯ್ಯ, ಶ್ರೀನಿವಾಸ್, ಶಿಕ್ಷಕ ಸಂಯೋಜಕ ಕೆಂಪಯ್ಯ ಮತ್ತಿತರರು ಭಾಗವಹಿಸಿದ್ದರು. ಶಿಕ್ಷಣಾಧಿಕಾರಿ ಅಂಥೋನಿ ಸ್ವಾಗತಿಸಿದರು. ಶಿಕ್ಷಕ ಸಂಯೋಜಕ ಅಶೋಕ ಕುಮಾರ ಸಿಂದಗಿ ವಂದಿಸಿದರು.