ಲೋಕಾಯುಕ್ತ ಬಲೆಗೆ ವಿಭಾಗೀಯ ನಿಯಂತ್ರಣಾಧಿಕಾರಿ
ಹೊಸಪೇಟೆ: ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹೊಸಪೇಟೆ ವಿಭಾಗೀಯ ಕಚೇರಿಯ ವಿಭಾಗೀಯ ನಿಯಂತ್ರಾಣಾಧಿಕಾರಿ ಪಿ.ವಿ.ಬಸವರಾವ್ ಗುರುವಾರ ಸಂಜೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಸಂಡೂರು ತಾಲೂಕಿನ ಡಿಪೋವಿನ ನಿರ್ವಾಹಕ ದಯಾನಂದ ಅವರ ಮೇಲಿರುವ ಕೆಲ ಪ್ರಕರಣಗಳನ್ನು ಮುಕ್ತಗೊಳಿಸಲು ವಿಭಾಗೀಯ ನಿಯಂತ್ರಾಣಾಧಿಕಾರಿ ಪಿ.ವಿ.ಬಸವರಾವ್ 20 ಸಾವಿರ ಲಂಚ ಪಡೆಯುವ ಸಂದರ್ಭದಲ್ಲಿ ಲೋಕಾಯುಕ್ತರು ದಾಳಿ ನಡೆಸಿ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಲೋಕಾಯುಕ್ತ ಇನ್ಸ್ಪೆಕ್ಟರ್ ರುದ್ರೇಶ್ ಸೇರಿದಂತೆ ಲೋಕಾಯುಕ್ತ ಸಿಬ್ಬಂದಿ ಆಯೂಬ್, ಶ್ರೀನಿವಾಸ್, ಧನಂಜಯ, ಅರುಣ್ ಸೇರಿದಂತೆ ಇತರೆ ಅಧಿಕಾರಿಗಳು ದಾಳಿಯಲ್ಲಿ ಭಾಗವಹಿಸಿದ್ದರು.