ಬಳ್ಳಾರಿ: ವಿಶೇಷ ಆರ್ಪಿಸಿ (ಕೆಎಸ್ಆರ್ಪಿ) 2012ರ ಕಾನ್ಸ್ಟೇಬಲ್ ಹುದ್ದೆಗಳಿಗೆ ಫೆ. 3ರಂದು ಬೆಳಗ್ಗೆ 11 ಗಂಟೆಗೆ ನಗರದ 4 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಪೊಲೀಸ್ ಅಧೀಕ್ಷಕ ಡಾ. ಚಂದ್ರಗುಪ್ತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಸ್.ಜಿ. ಸಂಯುಕ್ತ ಪದವಿ ಪೂರ್ವ ಕಾಲೇಜು, ಕಾಮರ್ಸ್ ಆ್ಯಂಡ್ ಬಿಬಿಎಂ ಕಾಲೇಜು ಹಾಗೂ ವಿಎಸ್ಆರ್ ಕಾನೂನು ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ. ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕರಪತ್ರ ಮತ್ತು ಕರೆ ಪತ್ರದಲ್ಲಿ ಸೂಚಿಸಿದ ಪ್ರಕಾರ ಯಾವುದಾದರೊಂದು ಭಾವಚಿತ್ರ ಇರುವ ಗುರುತಿನ ಪತ್ರ, ಸಹಿಷ್ಣತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯಲ್ಲಿ ಅರ್ಹಗೊಂಡಿರುವ ಪತ್ರ, ಬ್ಲೂ ಅಥವಾ ಬ್ಲಾಕ್ಬಾಲ್ ಪೆನ್ನುಗಳನ್ನು ತಮ್ಮೊಂದಿಗೆ ತರಬೇಕು. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ನಿಗದಿತ ಸಮಯಕ್ಕೆ ಹಾಜರಾಗಬೇಕು ಎಂದು ಅವರು ತಿಳಿಸಿದ್ದಾರೆ.