ಸಿಎಂ ಭೇಟಿ ಬಳಿಕ ಹಾಲು ದರ ಹೆಚ್ಚಳ
ಬಳ್ಳಾರಿ: ಹಾಲಿನ ದರ ಹೆಚ್ಚಳ ಕುರಿತಂತೆ ಫೆ.4ರಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರನ್ನು ಭೇಟಿ ಮಾಡಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಸೋಮಶೇಖರ ರೆಡ್ಡಿ ತಿಳಿಸಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಲೀಟರ್ ಹಾಲಿಗೆ 4 ಏರಿಕೆ ಮಾಡಿ ಫೆ.1ರಿಂದಲೇ ನೂತನ ಬೆಲೆ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ಪ್ರಸಕ್ತ ರಾಜಕೀಯ ವಿದ್ಯಮಾನಗಳಿಂದ ಶೆಟ್ಟರ್ ಅವರು ಸಾಕಷ್ಟು ಗೊಂದಲದಲ್ಲಿದ್ದು ದರ ಏರಿಕೆ ಮಾಡುವಲ್ಲಿ ವಿಳಂಬವಾಗಿದೆ. ಹೀಗಾಗಿ ಸೋಮವಾರ ಖುದ್ದಾಗಿ ಭೇಟಿ ಮಾಡಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು. ಚುನಾವಣೆ ಹಿನ್ನೆಲೆಯಲ್ಲಿ ಹಾಲಿನ ಬೆಲೆ ಏರಿಕೆಗೆ ಮುಖ್ಯಮಂತ್ರಿಗಳು ಒಪ್ಪದಿದ್ದಲ್ಲಿ ನಷ್ಟದಲ್ಲಿರುವ ರೈತರ ಹಿತದೃಷ್ಟಿಯಿಂದ ಫೆ. 6-7ರಂದು ಕೆಎಂಎಫ್ ನಿರ್ದೇಶಕರ ತುರ್ತು ಸಭೆ ಕರೆದು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.