ಜಿಗುಪ್ಸೆ: ವ್ಯಕ್ತಿ ನೇಣಿಗೆ ಶರಣು
ಕೂಡ್ಲಿಗಿ: ತಾಲೂಕಿನ ಪೂಜಾರಹಳ್ಳಿ ತಾಂಡಾದ ರಾಮ್ಜೀ ನಾಯ್ಕ (62) ಗುರುವಾರ ಬೆಳಗಿನ ಜಾವ ನೇಣಿಗೆ ಶರಣಾಗಿದ್ದಾನೆ. ತಮ್ಮ ಜಮೀನಿನಲ್ಲಿ 300 ಅಡಿ ಬೋರ್ವೆಲ್ ಕೊರೆಸಿದರ ನೀರು ಕಾಣಿಸಿಕೊಂಡಿರಲಿಲ್ಲ. ಖಾಸಗಿಯಾಗಿ ಕೈಗಡ ಮಾಡಿದ್ದರಿಂದ ಅದನ್ನು ತೀರಿಸಲಾಗದೆ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಮೃತನ ಪುತ್ರ ರಾಜಾ ನಾಯ್ಕ ನೀಡಿದ ದೂರಿನಂತೆ ಕಾನಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಎಎಸ್ಐ ಜಿತೇಂದ್ರ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.