ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಪ್ರತ್ಯೇಕ ಅಪಘಾತ: ಇಬ್ಬರ ಸಾವು

Parashurama
Updated On : 8 Feb 2013, 11:05 am

ಕೂಡ್ಲಿಗಿ:  ಪಟ್ಟಣದ ಹೊರವಲಯದಲ್ಲಿ ಗುರುವಾರ ಬೆಳಗಿನ ಜಾವ ನಡೆದ ಎರಡು ಪ್ರತ್ತೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 13ರ ಹನಸಿ ಕ್ರಾಸ್ ಬಳಿ ಬೈಕ್‌ನಲ್ಲಿ ಹೋಗುತ್ತಿದ್ದ ನಡುವನಹಳ್ಳಿ ದುರುಗೇಶ್ (30) ಎಂಬಾತ ಲಾರಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈತ ಗ್ರಾಪಂನಲ್ಲಿ ಪಂಪ್ ಆಪರೇಟರ್ ಆಗಿದ್ದು, ಜಾತ್ರೆಗೆಂದು ಗೆಳೆಯರೊಂದಿಗೆ ಹಿರೇಹೆಗ್ಡಾಳ್ ಗ್ರಾಮಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಮಲಾಪುರ ಸಮೀಪ ನಡೆದ ಇನ್ನೊಂದು ಅಪಘಾತದಲ್ಲಿ ಸಿದ್ದಯ್ಯನ ಹಟ್ಟಿಗೆ ತೆರಳಲು ರಾಷ್ಟ್ರೀಯ ಹೆದ್ದಾರಿ 13ನ್ನು ದಾಟುತ್ತಿದ್ದ ಮಡಿವಾಳರ ಬಸಪ್ಪ (55) ಎಂಬಾತನಿಗೆ ಚಿತ್ರದುರ್ಗ ಕಡೆಯಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ಬಸಪ್ಪನನ್ನು ಕೂಡ್ಲಿಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ದಾವಣಗೆರೆ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments