ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

371ನೇ ಕಲಂ ಜಾರಿಗೆ ಮುನ್ನವೇ ನೇಮಕಾತಿ ಅನ್ಯಾಯ

Parashurama
Updated On : 11 Feb 2013, 12:16 pm

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಫೆ. 10
ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿಗೆ ಕಲಂ 371 (ಜೆ) ಜಾರಿಗೆ ಮುನ್ನವೇ ರಾಜ್ಯ ಸರ್ಕಾರ ಸಾವಿರಾರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ, ಈ ಭಾಗದ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎನ್. ಧರಂ ಸಿಂಗ್ ಹೇಳಿದರು.
ಸಿರುಗುಪ್ಪದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, 40 ವರ್ಷಗಳ ಸತತ ಹೋರಾಟದ ಫಲವಾಗಿ ಕಲಂ 371(ಜೆ) ಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದರಿಂದ ಈ ಭಾಗದ ಜನರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಹೆಚ್ಚಿನ ಅನುಕೂಲ ಹಾಗೂ ಅಭಿವೃದ್ಧಿಗೆ ಸಹಕಾರವಾಗುತ್ತದೆ ಎಂದರು.
ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಧರಂ ಸಿಂಗ್, ಮುಂಬರುವ ಚುನಾವಣೆಯಲ್ಲಿ ಕರಪತ್ರ ಹಂಚಲು ಬಿಜೆಪಿ ಸರ್ಕಾರ ಈ ಬಜೆಟ್ ಮಂಡಿಸಿದೆ. ದಿಕ್ಕುದೆಸೆ ಇಲ್ಲದೆ ಅನುದಾನ ಘೋಷಣೆ ಮಾಡಿದೆ ಎಂದು ಲೇವಡಿ ಮಾಡಿದರು. ಹೋರಾಟದ ಫಲವಾಗಿ 43 ಹೊಸ ತಾಲೂಕುಗಳನ್ನು ಘೋಷಿಸಿದ್ದು ಸ್ವಾಗತಾರ್ಹ. ಆದರೆ, ಹೊಸ ತಾಲೂಕುಗಳಿಗೆ ಅಗತ್ಯ ಕಚೇರಿ ಹಾಗೂ ಸೌಲಭ್ಯ ಕಲ್ಪಿಸಲು ಯಾವುದೇ ಯೋಜನೆ ಪ್ರಕಟಿಸಿಲ್ಲ. ತಾಲೂಕು ರಚನೆ ಪ್ರಕ್ರಿಯೆಗೆ ಬೇಕಾಗುವ ಅನುದಾನವನ್ನೂ ಘೋಷಿಸಿಲ್ಲ ಎಂದು ಧರಂ ಸಿಂಗ್ ಹೇಳಿದರು.
ಅಭಿವೃದ್ಧಿ ಬಗ್ಗೆ ಮಾತನಾಡುವ ಬಿಜೆಪಿ ಸರ್ಕಾರ ಬೀದರ್-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಗೆ ಒಂದು ಪುಟ್ಟಿ ಮಣ್ಣು ಹಾಕುವುದೂ ಸಾಧ್ಯವಾಗಿಲ್ಲ ಎಂದು ಟೀಕಿಸಿದರು.
ಕಾಂಗ್ರೆಸ್ ಮುಖಂಡರಾದ ಬಿ.ಎಂ. ನಾಗರಾಜ, ಎಚ್. ರಾಮಯ್ಯ, ತಿಮ್ಮಣ್ಣ ನಾಯಕ, ಗಂಗಾರಾಮ್ ಸಿಂಗ್, ಗೋಪಾಲ ರೆಡ್ಡಿ, ವೆಂಕಟರಾಮ ರೆಡ್ಡಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments