ಬಳ್ಳಾರಿ

ಇಂದು ಕೆಜೆಪಿ ಕಾರ್ಯಕರ್ತರ ಸಭೆ

ಹೂವಿನಹಡಗಲಿ: ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ಜನತಾ ಪಕ್ಷದ ಸದಸ್ಯತ್ವ ನೋಂದಣಿಗಾಗಿ ಫೆ. 11ರಂದು ಕಾರ್ಯಕರ್ತರ ಸಭೆ ಕರೆಯಲಾಗಿದೆ. ಬೆಳಗ್ಗೆ 11 ಗಂಟೆಗೆ ಪಟ್ಟಣದ ಶ್ರೀ ಶಿವಶಾಂತವೀರ ಸಮುದಾಯ ಭವನದಲ್ಲಿ ನಡೆಯಲಿರುವ ಸಭೆಯಲ್ಲಿ ಕೆಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಗದೀಶ ಹಿರೇಮನಿ, ಮಾಜಿ ಶಾಸಕ ಅಶೋಕ ಕಾಟವೆ, ಬಳ್ಳಾರಿ ಜಿಲ್ಲಾ ಪೂರ್ವ ತಾಲೂಕುಗಳ ಜಿಲ್ಲಾಧ್ಯಕ್ಷ ಗುಡೇಕೋಟೆ ನಾಗರಾಜ ಪಾಲ್ಗೊಳ್ಳುವರು. ಈ ಸಭೆಯಲ್ಲಿ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ತಾಲೂಕು ಪದಾಧಿಕಾರಿಗಳ ಆಯ್ಕೆ ಕುರಿತು ಚರ್ಚಿಸಲಾಗುತ್ತದೆ. ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೆಜೆಪಿ ತಾಲೂಕು ಸಂಚಾಲಕ ಬಿ. ಶಿವಾನಂದ, ನ್ಯಾಯವಾದಿ ಕೆ. ವೀರನಗೌಡ ಕೋರಿದ್ದಾರೆ.
ಇಂದು ಮೂರ್ತಿ ಪ್ರತಿಷ್ಠಾಪನೆ, ಅಡ್ಡಪಲ್ಲಕ್ಕಿ ಉತ್ಸವ
ಕೊಟ್ಟೂರು: ಸಮೀಪದ ಭೀಮಸಮುದ್ರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಕಲ್ಲೇಶ್ವರ ಲಿಂಗ, ಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆ ಮತ್ತು ಉಜ್ಜಯಿನಿ ಸದ್ಧರ್ಮ ಪೀಠದ ಶ್ರೀ 1008 ಜಗದ್ಗುರು  ಸಿದ್ದಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳವರ ಅಡ್ಡಪಲ್ಲಕ್ಕಿ ಮಹೋತ್ಸವ ಫೆ. 11ರಂದು ನಡೆಯಲಿದೆ. ಸೋಮವಾರ ಬೆಳಗ್ಗೆ ಮೂರ್ತಿಗಳಿಗೆ ಮಹಾರುದ್ರಾಭಿಷೇಕದ ಬಳಿಕ ಮಧ್ಯಾಹ್ನ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ, ಧರ್ಮಸಭೆ ಅದ್ಧೂರಿಯಾಗಿ ಜರುಗಲಿದೆ. ಸಂಸದೆ ಜೆ. ಶಾಂತಾ, ಶಾಸಕರಾದ ಬಿ. ಶ್ರೀರಾಮುಲು, ಬಿ. ನಾಗೇಂದ್ರ, ಸೋಮಶೇಖರ ರೆಡ್ಡಿ, ಮಾಜಿ ಶಾಸಕರಾದ ಭಾಗೀರಥಿ ಮರುಳಸಿದ್ದನಗೌಡ, ಎನ್.ಟಿ. ಬೊಮ್ಮಣ್ಣ, ರವೀಂದ್ರನಾಥಬಾಬು, ಜಿಪಂ ಸದಸ್ಯರಾದ ಸಾವಿತ್ರಮ್ಮ ವೀರಭದ್ರಪ್ಪ, ಕೆ.ಎಂ. ಶಶಿಧರ, ಸುನಂದಾಬಾಯಿ ಕೃಷ್ಣನಾಯಕ , ಮುಖಂಡರಾದ ಎಂ.ಎಂ.ಜೆ. ಹರ್ಷವರ್ಧನ್, ಚಿದಾನಂದಪ್ಪ, ರೇವಣ್ಣ, ಚಾನುಕೋಟಿ ಸಿದ್ಧಲಿಂಗಶಿವಾಚಾರ್ಯ ಸ್ವಾಮೀಜಿ, ಕಾನಾಮಡಗಿನ ಐಮುಡಿ ಶರಣಾರ್ಯರು, ಕೂಡ್ಲಿಗಿಯ ಪ್ರಶಾಂತಸಾಗರ ಶಿವಾಚಾರ್ಯ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ ಎಂದು ಕಲ್ಲೇಶ್ವರ ಸೇವಾಶ್ರಮ ಸಮಿತಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

15 ವರ್ಷದ ಹಳೆ ವಿಡಿಯೋ ಅದಂತೆ.., ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': 'ಜೈಲರ್ 2' ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!