ಹೂವಿನಹಡಗಲಿ: ರೋಗಿಗಳ ಪರದಾಟ
ಹೂವಿನಹಡಗಲಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎರಡು ದಿನಗಳಿಂದ ವೈದ್ಯರು ಮುಷ್ಕರ ನಡೆಸುತ್ತಿರುವ ಕಾರಣ ತಾಲೂಕಿನಲ್ಲಿ ರೋಗಿಗಳು ಪರದಾಡುವಂತಾಯಿತು. ರಾಜ್ಯದ 10 ಜಿಲ್ಲಾ ಆಸ್ಪತ್ರೆಗಳನ್ನು ಇಲಾಖೆಗೆ ವಹಿಸುವುದು, ಜಿಪಂನಿಂದ ವೇತನ ಪಾವತಿ ಪದ್ಧತಿ ಕೈಬಿಟ್ಟು ನೇರವಾಗಿ ಸರ್ಕಾರವೇ ಪ್ರತಿ ತಿಂಗಳು ಸಮಯಕ್ಕೆ ಸರಿಯಾಗಿ ವೇತನ ನೀಡಬೇಕು. ವರ್ಗಾವಣೆ ಪದ್ಧತಿ ಸಡಿಲಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ವೈದ್ಯರು ರಾಜ್ಯವ್ಯಾಪಿ ಮುಷ್ಕರ ಆರಂಭಿಸಿರುವುದರಿಂದ ರೋಗಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಕರ್ತವ್ಯ ಬಹಿಷ್ಕರಿಸಿ ವೈದ್ಯರು ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಮುಷ್ಕರದಲ್ಲಿ ಪಾಲ್ಗೊಂಡಿರುವುದರಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಲಭ್ಯತೆ ಇರಲಿಲ್ಲ. ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗಳಿಗೆ ಬರುತ್ತಿದ್ದ ರೋಗಿಗಳು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಾ ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡಿದ್ದ ದೃಶ್ಯ ಸಾಮಾನ್ಯವಾಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.