ವಿಮ್ಸ್ ಹವಾನಿಯಂತ್ರಕಗಳ ದುರಸ್ತಿಗೆ ಆಗ್ರಹ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಫೆ. 11
ವಿಮ್ಸ್ನ ತುರ್ತು ಚಿಕಿತ್ಸಾ ಘಟಕಗಳಲ್ಲಿ ಕೆಟ್ಟು ಹೋಗಿರುವ ಹವಾನಿಯಂತ್ರಕಗಳನ್ನು ಕೂಡಲೇ ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿ ನವಕರ್ನಾಟಕ ಯುವಶಕ್ತಿ ಸಂಘದ ವತಿಯಿಂದ ವಿಮ್ಸ್ನ ಆವರಣದಲ್ಲಿ ಪ್ರತಿಭಟನೆ ನಡೆಸಿ, ವಿಮ್ಸ್ ನಿರ್ದೇಶಕ ಗಂಗಾಧರಗೌಡ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ವಿಮ್ಸ್ನಲ್ಲಿ ಹೃದಯಾಘಾತಕ್ಕೆ ಚಿಕಿತ್ಸೆ ನೀಡುವ ಕೊಠಡಿ, ರಕ್ತಭಂಡಾರ ಹಾಗೂ ಇತರೆ ಶಸ್ತ್ರಚಿಕಿತ್ಸಾ ಘಟಕಗಳಲ್ಲಿ ಹಲವಾರು ದಿನಗಳಿಂದ ಹವಾನಿಯಂತ್ರಕ (ಎಸಿ) ಯಂತ್ರಗಳು ಕೆಟ್ಟು ಹೋಗಿವೆ. ಆದರೂ ವಿಮ್ಸ್ನವರು ದುರಸ್ತಿಗೊಳಿಸಲು ಮುಂದಾಗಿಲ್ಲ. ಇದರಿಂದಾಗಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಉಸಿರಾಡಲು ತೊಂದರೆಯಾಗುತ್ತಿದೆ. ಇನ್ನು ವಿದ್ಯುತ್ ಕಣ್ಣಾಮುಚ್ಚಾಲೆಯಾಟದಿಂದ ಸೊಳ್ಳೆಗಳ ಕಾಟವೂ ಹೆಚ್ಚಾಗಿದೆ. ಕುಡಿಯುವ ನೀರಿನ ವ್ಯವಸ್ಥೆಯೂ ಇಲ್ಲ. ಕಳೆದ ಕೆಲ ತಿಂಗಳಿಂದ ಇಂತಹ ಸಮಸ್ಯೆಯನ್ನು ವಿಮ್ಸ್ ಎದುರಿಸುತ್ತಿದ್ದರೂ, ಅಧಿಕಾಗಳು ದುರಸ್ತಿಗೆ ಮುಂದಾಗಿಲ್ಲ, ಕೂಡಲೇ ದುರಸ್ತಿ ಮಾಡಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ವಿಮ್ಸ್ ನಿರ್ದೇಶಕ ಗಂಗಾಧರಗೌಡ ಅವರಿಗೆ ಸಮಸ್ಯೆಯ ಕುರಿತಾಗಿ ತಿಳಿಸಿ, ಕೂಡಲೇ ದುರಸ್ತಿ ಮಾಡಿಸಿಬೇಕೆಂದು ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ನವಕರ್ನಾಟಕ ಯುವಶಕ್ತಿ ಸಂಘದ ಬಿ.ಚಂದ್ರಶೇಖರ್ ಆಚಾರ್, ನವೀನ್ ಕುಮಾರ್, ಗಂಗಾಧರ, ಶರಣಗೌಡ, ಬಿ.ಎಂ. ವಾಮದೇವ ಸ್ವಾಮಿ, ವೀರೇಶ್, ಸೂರಿ ಮತ್ತಿತರರು ಭಾಗವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.