ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಬೈಕ್‌ಲಾರಿಡಿಕ್ಕಿ:ಓರ್ವಸಾವು

Parashurama
Updated On : 15 Feb 2013, 12:05 pm

ಹೊಸಪೇಟೆ: ಬೈಕ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ವ್ಯಾಸನಕೆರೆ ರೇಲ್ವೆ ನಿಲ್ದಾಣದ ರಾಷ್ಟ್ರೀಯ ಹೆದ್ದಾರಿ-13 ರಸ್ತೆಯಲ್ಲಿ ಗುರುವಾರ ನಡೆದಿದೆ.
 ಹನುಮನಹಳ್ಳಿ ಗ್ರಾಮದ ನಿವಾಸಿ ಮದರ್ ಸಾಬ್ (50) ಮೃತಪಟ್ಟ ಬೈಕ್ ಸವಾರ. ಬೈಕ್ ಸವಾರನು ತನ್ನ ಅಂಗಡಿಗೆ ವಸ್ತುಗಳ ಖರೀದಿಸಲು ಹೊಸಪೇಟೆಗೆ ಹೋಗಿ ವಾಪಸ್ ಹನುಮನಹಳ್ಳಿಗೆ ಬರುವಾಗ ಮರಿಯಮ್ಮನಹಳ್ಳಿ ಕಡೆಯಿಂದ ಬಂದ ಲಾರಿಯೊಂದು ಬೈಕ್ ಸವಾರನಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ತೀವ್ರ ಸ್ವರೂಪದ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ನಗರದ ನೂರು ಹಾಸಿಗೆ ಆಸ್ಪತ್ರೆಯಲ್ಲಿ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾನೆ. ಮರಿಯಮ್ಮನಹಳ್ಳಿ ಠಾಣೆ ಪಿಎಸ್‌ಐ ಕೆ. ಜಯಪ್ರಕಾಶ್ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement