ಬಳ್ಳಾರಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಬೇಕು, ಚಿಲ್ಲರೆ ವ್ಯಾಪಾರದಲ್ಲಿ ವಿದೇಶಿ ಬಂಡವಾಳ ಹೂಡಿಕೆಗೆ ಅವಕಾಶ ನೀಡಬಾರದು, ಕಾರ್ಮಿಕ ಹಕ್ಕುಗಳ ರಕ್ಷಣೆಗೆ ಮುಂದಾಗಬೇಕೆಂದು ಒತ್ತಾಯಿಸಿ ಫೆ. 20 ಮತ್ತು 21ರಂದು ಕರೆ ನೀಡಿರುವ ಮುಷ್ಕರಕ್ಕೆ ಕಾರ್ಮಿಕ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಬುಧವಾರ ಹಾಗೂ ಗುರುವಾರ ಸಾರಿಗೆ, ಬ್ಯಾಂಕ್, ವಿಮೆ, ಅಂಚೆ ಮತ್ತಿತರ ಸೇವೆಗಳು ಸ್ಥಗಿತಗೊಳಲಿದೆ. ಬ್ಯಾಂಕ್, ದೂರ ಸಂಪರ್ಕ, ವಿಮೆ, ಅಂಚೆ ಇಲಾಖೆಯ ಕಾರ್ಮಿಕ ಸಂಘಟನೆಗಳು ಮುಷ್ಕರವನ್ನು ಬೆಂಬಲಿಸಿವೆ ಎಂದು ಜೆಸಿಟಿಯು ತಿಳಿಸಿದೆ.
ಶಾಲೆಗಳಿಗೆ ರಜೆ: ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಬುಧವಾರ ಒಂದು ದಿನ ಮಾತ್ರ ರಜೆ ಘೋಷಿಸಲಾಗಿದೆ ಎಂದು ಡಿಸಿ ಬಿಸ್ವಾಸ್ ತಿಳಿಸಿದ್ದಾರೆ.