ಬಳ್ಳಾರಿ

ಸುದ್ದಿ ಸಂಕ್ಷೇಪ

ಅಪಘಾತ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು
ಸಿರುಗುಪ್ಪ: ಅಪರಿಚಿತ ಲಾರಿಯೊಂದು ಬೈಕ್‌ಗೆ ಮುಖಮುಖಿ ಡಿಕ್ಕಿಹೊಡೆದ ಪರಿಣಾಮ ಬೈಕ್‌ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ತೆಕ್ಕಲಕೋಟೆ ಸಮೀಪದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮೃತನನ್ನು ಸಿರುಗುಪ್ಪ ತಾಲೂಕಿನ ಕರೂರು ಗ್ರಾಮದ ವಿರೂಪಾಕ್ಷರೆಡ್ಡಿ (32) ಎಂದು ಗುರ್ತಿಸಲಾಗಿದೆ. ಕರೂರಿನಿಂದ ಸಿರುಗುಪ್ಪಕ್ಕೆ ಹೋಗುತ್ತಿರುವಾಗ ಎದುರಿಗೆ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ  ಮೃತನಾಗಿದ್ದಾನೆ. ಈ ಕುರಿತಾಗಿ ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದು ಮಿನಿ ಉದ್ಯೋಗ ಮೇಳ
ಬಳ್ಳಾರಿ: ಕೌಶಲ್ಯ ಆಯೋಗ, ಉದ್ಯೋಗ ಮತ್ತು ತರಬೇತಿ ಇಲಾಖೆ, ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಜಂಟಿಯಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಫೆ. 24ರಂದು ಬೆಳಗ್ಗೆ 10 ಗಂಟೆಗೆ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಉದ್ಯೋಗಾಧಿಕಾರಿ ಹಟ್ಟೆಪ್ಪ ತಿಳಿಸಿದ್ದಾರೆ. ಬೆಂಗಳೂರು ಮೂಲದ ಕಂಪನಿಗಳು ಭದ್ರತಾ ಅಧಿಕಾರಿಗಳು, ಸಹಾಯಕ ಭದ್ರತಾ ಅಧಿಕಾರಿಗಳು ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗಾಗಿ  ಮೇಳದಲ್ಲಿ ಪಾಲ್ಗೊಳ್ಳಲಿವೆ. ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಯಾವುದೇ ಪದವೀಧರರು ಈ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9844444958, 90364 22052 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!