ಬಳ್ಳಾರಿ: ಕೆಜೆಪಿ ಪದಾಧಿಕಾರಿಗಳ ನೇಮಕ
ಬಳ್ಳಾರಿ: ಕರ್ನಾಟಕ ಜನತಾ ಪಕ್ಷದ ವಿವಿಧ ಘಟಕಗಳಿಗೆ ಅಧ್ಯಕ್ಷ ಮತ್ತು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಜಿಲ್ಲೆಗೆ ಇತ್ತೀಚೆಗೆ ಆಗಮಿಸಿದ್ದ ಕೆಜೆಪಿ ಯುವ ಘಟಕ ರಾಜ್ಯಾಧ್ಯಕ್ಷ ಜಗದೀಶ್ ಹಿರೇಮನಿಯವರ ನೇತೃತ್ವದಲ್ಲಿ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಬಳ್ಳಾರಿ ಜಿಲ್ಲಾ ಯುವ ಘಟಕಕ್ಕೆ ಅಧ್ಯಕ್ಷರಾಗಿ ಮಂಜುನಾಥ, ಉಪಾಧ್ಯಕ್ಷರಾಗಿ ಬಸವರಾಜ ಜಲಿಕಟ್ಟಿ, ಮಹಿಳಾ ಘಟಕಕ್ಕೆ ಅಧ್ಯಕ್ಷರಾಗಿ ಜಿ. ಕಮಲಾ ಬಸವರಾಜ್, ಕಾರ್ಯದರ್ಶಿಯಾಗಿ ಪುಷ್ಪಲತಾ ನೇಮಕವಾಗಿದ್ದಾರೆ.