ಬಳ್ಳಾರಿ

ರಾಷ್ಟ್ರ ಭದ್ರತೆಯಲ್ಲಿ ಯುವಕರ ಪಾತ್ರ ಮಹತ್ವದ್ದು

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಜ. 21
ರಾಷ್ಟ್ರದ ಭದ್ರತೆಯಲ್ಲಿ ಯುವಕರ ಪಾತ್ರ ಮಹತ್ತರವಾದುದು. ಭೂಸೇನೆಯ ನೇಮಕಾತಿಯಲ್ಲಿ ಯುವಕರು ಹೆಚ್ಚಿನ ಪ್ರಮಾಣದಲ್ಲಿ ಆಯ್ಕೆಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸುವ ಮೂಲಕ ದೇಶಕ್ಕಾಗಿ ಹಗಲಿರುಳನ್ನದೆ ಶ್ರಮಿಸಬೇಕು ಎಂದು ಭೂಸೇನೆಯ ಉಪಮಹಾನಿರ್ದೇಶಕ ಬ್ರಿಗೇಡಿಯರ್ ಸೋಮನಾಥ್ ಝಾ ತಿಳಿಸಿದರು.
ಅರ್ಹರು ಮತ್ತು ಆಸಕ್ತರನ್ನು ಮುಕ್ತವಾಗಿ ಸಾಮರ್ಥ್ಯದ ಆಧಾರದಲ್ಲಿ ಸೇನಾ ನೇಮಕಾತಿ ರ್ಯಾಲಿಯಲ್ಲಿ ಆಯ್ಕೆ ಮಾಡಲಾಗುತ್ತಿದೆ. ಆದರೆ ಯಾವುದೇ ಮಧ್ಯವರ್ತಿಗೆ ಅವಕಾಶವಿಲ್ಲ. ನೇಮಕಾತಿ ಪ್ರಕ್ರಿಯೆ ವ್ಯವಸ್ಥಿತವಾಗಿ ನಡೆಯುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನ ಬಳಕೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳ ಆಮಿಷಗಳಿಗೆ ಒಳಗಾಗಿ ಮೋಸಹೋಗಬಾರದು, ಯಾವುದೇ ಸಂಶಯಾಸ್ಪದ ವ್ಯಕ್ತಿ, ವಾಹನಗಳು ಕಂಡು ಬಂದಲ್ಲಿ ವಿಚಾರಣೆಗೆ ಒಳಪಡಿಸಲಾಗುತ್ತದೆ ಎಂದರು.
ಸೋಮವಾರ ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯುವಕರು ಹೆಚ್ಚಿನ ಪ್ರಮಾಣದಲ್ಲಿ ಆಯ್ಕೆಯಾದರೆ ಕ್ಲಿಷ್ಟಕರ ಪರಿಸ್ಥಿತಿಯನ್ನು ಸುಲಲಿತವಾಗಿ ನಿರ್ವಹಿಸಬಹುದು. ಪ್ರತಿಯೊಬ್ಬ ಯುವಕನನ್ನು ಸೇನೆಗೆ ಸೇರಿಸಿಕೊಳ್ಳುವ ಬಯಕೆ ನಮ್ಮದಾಗಿದ್ದು, ಅಭ್ಯರ್ಥಿಗಳು ದೈಹಿಕ ಮತ್ತು ಬೌದ್ಧಿಕವಾಗಿ ಅರ್ಹತೆ ಪಡೆಯಬೇಕಿದೆ ಎಂದರು.
ಅಭ್ಯಾಸ ಮಾಡಿ ಪರೀಕ್ಷೆಗೆ ಬನ್ನಿ: ಈ ಹಿಂದೆ ನಡೆದ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಿ ವಿಫಲರಾದ ಅಭ್ಯರ್ಥಿಗಳು ಸಾಕಷ್ಟು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ. ನಂತರ ಆಧುನಿಕ ಮಾಪನಗಳ ಮೂಲಕ ದೈಹಿಕ ಸಾಮರ್ಥ್ಯ ಪರೀಕ್ಷಿಸಲಾಗುತ್ತದೆ. ವೈದ್ಯಕೀಯ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ದೇಹದಾರ್ಡ್ಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಇಲ್ಲಿ ಉತ್ತೀರ್ಣರಾದವರೆಲ್ಲರನ್ನು ಲಿಖಿತ ಪರೀಕ್ಷೆಗೆ ಅರ್ಹರೆಂದು ಪರಿಗಣಿಸಿ ಪರೀಕ್ಷಾ ಪ್ರವೇಶ ಪತ್ರಗಳನ್ನು ಕಳುಹಿಸಲಾಗುತ್ತದೆ. ಈ ರ್ಯಾಲಿಯಲ್ಲಿ ಆಯ್ಕೆಯಾದವರು ಗಡಿಭಾಗದಲ್ಲಿ ಕಾರ್ಯನಿರ್ವಹಿಸಬೇಕಾಗಿದೆ. ಹೀಗಾಗಿ ಪರೀಕ್ಷೆಯು ಹಿಂದಿ ಮತ್ತು ಆಂಗ್ಲ ಭಾಷೆಯಲ್ಲಿ ನಡೆಸಲಾಗುತ್ತದೆ. ಅಭ್ಯರ್ಥಿಗಳು ತರಬೇತಿ ಪಡೆದು ಅಭ್ಯಾಸ ಮಾಡಿ ಪರೀಕ್ಷೆಗೆ ಹಾಜರಾಗಿ ಉತ್ತೀರ್ಣರಾಗಬೇಕು ಎಂದು ಸಲಹೆ ಮಾಡಿದರು.
ಕರ್ನಾಟಕ ರಾಜ್ಯದ ನೇಮಕಾತಿ ಅಧಿಕಾರಿಗಳನ್ನು ಹೊರತುಪಡಿಸಿ ಬೇರೆ ಬೇರೆ ನೇಮಕಾತಿ ರ್ಯಾಲಿಗಳ  ಅಧಿಕಾರಿಗಳು ಹಾಗೂ 7 ಮೆಡಿಕಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಈ ವೈದ್ಯಕೀಯ ಅಧಿಕಾರಿಗಳು ಉತ್ತರ ಭಾರತದ ಬೇರೆ ಬೇರೆ ನೇಮಕಾತಿ ಪ್ರಾಧಿಕಾರಗಳಿಂದ ನಿಯೋಜನೆಯಾಗಿದ್ದಾರೆ. ಪ್ರತಿ ಅಂಶಗಳನ್ನು ಸೇನೆಯ ಅಂತರ್ಜಾಲದಲ್ಲಿ ಎಲ್ಲ ಹಂತಗಳಲ್ಲೂ ದಾಖಲು ಮಾಡಲಾಗುತ್ತದೆ. ಈ ರ್ಯಾಲಿಯಲ್ಲಿ ಸುಮಾರು 25 ಸಾವಿರ ಅಭ್ಯರ್ಥಿಗಳು ಪಾಲ್ಗೊಂಡಿದ್ದಾರೆ ಎಂದು ವಿವರಿಸಿದರು.
ಸೇನೆಯ ಕರ್ನಲ್ ವಿಧಾನ್ ಶರಣ್, ಮಾಜಿ ಸೈನಿಕರ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಇಲಾಖೆಯ ಉಪನಿರ್ದೇಶಕ ಈಶ್ವರ ಕಡೊಳಿ, ನೋಡೆಲ್ ಅಧಿಕಾರಿ ಹಟ್ಟೆಪ್ಪ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ