ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

27ರಂದು ನ್ಯಾಯಾಧೀಶರ ವಸತಿಗೃಹ ಉದ್ಘಾಟನೆ (ಸುದ್ದಿ ಸಂಕ್ಷೇಪ)

Mainashree
Updated On : 25 Jan 2013, 10:54 am

ಬಳ್ಳಾರಿ: ಜಿಲ್ಲಾ ನ್ಯಾಯಾಂಗ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಸಹಯೋಗದಲ್ಲಿ ಜ. 27ರಂದು ಬೆಳಗ್ಗೆ 10.30 ಗಂಟೆಗೆ ಪಾರ್ವತಿನಗರದ ಬಳಿ ತಾಳೂರು ರಸ್ತೆ ನ್ಯಾಯಾಂಗ ಇಲಾಖೆಯ ನಿವೇಶನದಲ್ಲಿರುವ ನ್ಯಾಯಾಧೀಶರ ನೂತನ ವಸತಿಗೃಹಗಳ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ. ವಿಶ್ವೇಶ್ವರ ಭಟ್ ತಿಳಿಸಿದ್ದಾರೆ. ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳಾದ ಕೆ. ಶ್ರೀಧರರಾವ್ ಉದ್ಘಾಟಿಸುವರು. ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಬಳ್ಳಾರಿ ಜಿಲ್ಲಾ ನ್ಯಾಯಾಂಗದ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾಧಿಕಾರಿ ಅಮ್ಲನ್ ಆದಿತ್ಯ ಬಿಸ್ವಾಸ್, ವಕೀಲರ ಸಂಘದ ಅಧ್ಯಕ್ಷ ಎ.ಜಿ. ಶಿವಕುಮಾರ್ ಉಪಸ್ಥಿತರಿರುತ್ತಾರೆ.
ದೀಪಾಲಂಕಾರ: ಸೂಚನೆ
ಬಳ್ಳಾರಿ: ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಯ ಎಲ್ಲ ಧಾರ್ಮಿಕ ಸಂಸ್ಥೆಗಳು, ದೇವಸ್ಥಾನಗಳಿಗೆ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಜ. 25 ಹಾಗೂ ಜ. 26ರಂದು ವಿದ್ಯುತ್ ದೀಪಾಲಂಕಾರ, ಜ. 26ರಂದು ಪ್ರಾತಃಕಾಲ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ವ್ಯವಸ್ಥೆ ಮಾಡಬೇಕು ಎಂದು ಧಾರ್ಮಿಕ ಸಂಸ್ಥೆಗಳ ಆಡಳಿತ ಮುಖ್ಯಸ್ಥರು ಹಾಗೂ ಸಂಬಂಧಿಸಿದ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಇಲಾಖೆಯ ಸಹಾಯಕ ಆಯುಕ್ತ ಶಶಿಧರ್ ಬಗಲಿ ಸೂಚಿಸಿದ್ದಾರೆ.
ಸಮವಸ್ತ್ರ ವಿತರಣೆ
ಬಳ್ಳಾರಿ: ತಾಲೂಕಿನ ಜಾನಕಿ ಕಾರ್ಪ್ ಲಿಮಿಟೆಡ್ ಕಂಪನಿಯಿಂದ ಶಿಡಿಗಿನಮೊಳ ಗ್ರಾಪಂ ವ್ಯಾಪ್ತಿಯಲ್ಲಿನ ಮೀನಳ್ಳಿ, ಎಚ್. ವೀರಾಪುರ, ಕಾರೆಕಲ್ಲು ಗ್ರಾಮಗಳ ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರಗಳನ್ನು ಕಂಪನಿಯ ಹಿರಿಯ ಮುಖ್ಯ ವ್ಯವಸ್ಥಾಪಕ ಬಿ.ಪಿ. ಸುರೇಶ್ ವಿತರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement