ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಸಮಯಪ್ರಜ್ಞೆಯಿಂದ ಅಗ್ನಿ ದುರಂತ ತಪ್ಪಿಸಬಹುದು

Mainashree
Updated On : 25 Jan 2013, 10:53 am

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಜ. 24
ಆಕಸ್ಮಿಕವಾಗಿ ಸಂಭವಿಸಬಹುದಾದ ಅಗ್ನಿದುರಂತಗಳನ್ನು ಸಮಯ ಪ್ರಜ್ಞೆಯಿಂದ ತಪ್ಪಿಸಬಹುದು ಎಂದು ಅಗ್ನಿ ಶಾಮಕ ಇಲಾಖೆಯ ಪ್ರಾದೇಶಿಕ ಅಧಿಕಾರಿ ನರಸಿಂಹಮೂರ್ತಿ ತಿಳಿಸಿದರು.
ರಾಷ್ಟ್ರೀಯ ಸೇವಾ ಯೋಜನೆ ಘಟಕ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಜಂಟಿಯಾಗಿ ನಗರದ ವೀರಶೈವ ಕಾಲೇಜು ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ ರಾಷ್ಟ್ರ ಮಟ್ಟದ ಅಗ್ನಿ ದುರಂತ ಮತ್ತು ತೆರವು ಕಾರ್ಯಾಚರಣೆ ಅಣಕು ಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಯಾವುದೇ ಮುನ್ಸೂಚನೆಯಿಲ್ಲದೇ ಸಂಭವಿಸುವ ಭೂಕಂಪ, ಭೂಕುಸಿತ, ನೆರೆಹಾವಳಿ, ವಿದ್ಯುತ್ ಅವಘಡ ಮುಂತಾದ ದುರಂತಗಳಲ್ಲಿ ಸಿಲುಕಿಕೊಂಡಿರುವವರನ್ನು ರಕ್ಷಿಸುವಲ್ಲಿ ಯುವಕರು ಪಾಲ್ಗೊಳ್ಳುವಿಕೆಯಲ್ಲಿ ಮುಖ್ಯವಾಗಿದೆ ಎಂದು ತಿಳಿಸಿದರು.
ಕಾಲೇಜಿನ ಪ್ರಾಚಾರ್ಯ ಡಾ.ಆರ್. ಮರೇಗೌಡ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಸಾಮಾಜಿಕ ಕಾಳಜಿ ಮತ್ತು ಬದ್ಧತೆ ಕಡಿಮೆಯಾಗುತ್ತಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳಲ್ಲಿ ನಿಸ್ವಾರ್ಥ ಸೇವಾ ಮನೋಭಾವ ಮೂಡಿಸುವ ಶಿಕ್ಷಣದ ಅಗತ್ಯವಿದೆ ಎಂದು ಹೇಳಿದ್ದಾರೆ. ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಜಾನೆಕುಂಟೆ ಸಣ್ಣ ಬಸವರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಅಗ್ನಿಶಾಮಕ ಅಧಿಕಾರಿ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಸ್ವಯಂ ಸೇವಕರ 10 ತಂಡಗಳನ್ನು ರಚಿಸಿ ಪೂರ್ವಭಾವಿ ತರಬೇತಿ ನೀಡಿದರು.
ಈ ವೇಳೆ ಮತ್ತೊಬ್ಬ ಅಗ್ನಿಶಾಮಕ ಅಧಿಕಾರಿ ಸಿದ್ದೇಶ್ವರ, ಆರೋಗ್ಯ ತುರ್ತು ಸೇವಾ ಸಿಬ್ಬಂದಿಗಳು, ಕಾಲೇಜು ವಿದ್ಯಾರ್ಥಿಗಳು ಇತರರು ಭಾಗವಹಿಸಿದ್ದರು.
ಯುವ ಪ್ರಶಸ್ತಿಗೆ ಆಹ್ವಾನ
ಬಳ್ಳಾರಿ: ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯಲ್ಲಿ ನೋಂದಾಯಿತ ಯುವಕ ಮತ್ತು ಯುವತಿಯರಿಗೆ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ ತಿಳಿಸಿದ್ದಾರೆ. ಒಂದು ವರ್ಷದ ಸಮಾಜ ಸೇವೆ ಮತ್ತು ಪರಿಸರ ರಕ್ಷಣೆ, ಅರಣ್ಯೀಕರಣ, ಕೊಳಚೆ ನಿರ್ಮೂಲನೆ, ಸಾಮೂಹಿಕ ವಿವಾಹ, ಕ್ರೀಡಾ ತರಬೇತಿ, ಜನಪದ ಕಲೆಗಳನ್ನು ಜನಪ್ರಿಯಗೊಳಿಸುವುದು, ಸಣ್ಣ ಉಳಿತಾಯಕ್ಕೆ ಪ್ರೋತ್ಸಾಹ, ಕ್ರೀಡಾಂಗಣಗಳ ಅಭಿವೃದ್ಧಿ ಮತ್ತಿತರ ಸಾರ್ವಜನಿಕ ಕ್ಷೇತ್ರಗಳಲ್ಲಿ  ಗಣನೀಯ ಸಾಧನೆ ಮಾಡಿದ ಯುವಕ-ಯುವತಿಯವರು ಅರ್ಜಿ ಸಲ್ಲಿಸಬಹುದು.  ಅರ್ಜಿದಾರರು ಸಾಧನೆ ಕುರಿತು ದಿನಪತ್ರಿಕೆಗಳಲ್ಲಿ ಪ್ರಕಟವಾದ ಪ್ರತಿ, ಪ್ರಶಸ್ತಿ ಪತ್ರಗಳ ಪ್ರತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಫೆ. 10ರೊಳಗಾಗಿ ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಗೆ ಸಲ್ಲಿಸಬಹುದು. ಮಾಹಿತಿಗಾಗಿ ದೂರವಾಣಿ ಸಂಖ್ಯೆ 08392 200441 ಸಂಪರ್ಕಿಸಬಹುದೆಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement