ಬಳ್ಳಾರಿ

ಮರುಮೌಲ್ಯಮಾಪನ: ಎಸ್‌ಎಫ್‌ಐ ಆಗ್ರಹ




ಹೊಸಪೇಟೆ: ಬಿಕಾಂ ಮೂರನೇ ಸೆಮಿಸ್ಟರ್‌ನ ಲೆಕ್ಕಶಾಸ್ತ್ರದ ವಿಷಯದ ಮೌಲ್ಯಮಾನ ದೋಷದಿಂದ ಕೂಡಿರುವುದರಿಂದ ಮರುಮೌಲ್ಯಮಾಪನ ಮಾಡಬೇಕು ಎಂದು ಒತ್ತಾಯಿಸಿ ಎಸ್‌ಎಫ್‌ಐ ಸಂಘಟನೆ ಪದಾಧಿಕಾರಿಗಳು ಗುರುವಾರ ವಿಜಯನಗರ ಕಾಲೇಜು ಎದುರು ಪ್ರತಿಭಟನೆ ನಡೆಸಿದರು. ಎಸ್‌ಎಫ್‌ಐ ತಾಲೂಕು ಅಧ್ಯಕ್ಷ ಟಿ. ಶರತಕುಮಾರ್ ಮಾತನಾಡಿ, ಕಾಲೇಜಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳ ಮೂರನೇ ಸೆಮಿಸ್ಟರ್‌ನ ಲೆಕ್ಕಶಾಸ್ತ್ರದ ಮೌಲ್ಯಮಾಪನ ದೋಷಪೂರಿತವಾಗಿದೆ. ಈ ಕೂಡಲೇ ಉಚಿತವಾಗಿ ಮರುಮೌಲ್ಯಮಾಪನ ಮಾಡಬೇಕು ಎಂದು ಅವರು ಆಗ್ರಹಿಸಿದರು. ತಾಲೂಕು ಕಾರ್ಯದರ್ಶಿ ಪಂಪಾನಂದ ಮಾತನಾಡಿ, ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಆರಂಭವಾಗಿ ಮೂರು ವರ್ಷ ಕಳೆದರೂ ಸರಿಯಾದ ಮೌಲ್ಯಮಾಪನಕ್ಕೆ ಗಮನಹರಿಸುತ್ತಿಲ್ಲ. ಈ ಬಗ್ಗೆ ಅನೇಕ ಬಾರಿ ಮನವಿ ಮಾಡಿದರೂ ವಿವಿಯವರು ಸ್ಪಂದಿಸುತ್ತಿಲ್ಲ ಎಂದು ಆರೇಪಿಸಿದರು. ಜಿಲ್ಲಾ ಕಾರ್ಯದರ್ಶಿ ಕೆ. ಸುರೇಶ್ ಚವ್ಹಾಣ್, ತಾಲೂಕು ಉಪಾಧ್ಯಕ್ಷೆ ವಿಜಯಶ್ರೀ, ತಾಲೂಕು ಸಹಕಾರ್ಯದರ್ಶಿ ವಸಂತ ಕಲಾಲ, ರಮೇಶ, ಖಾದಭಾಷ, ಭೀಮನಗೌಡ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ವಿಜಯನಗರ ಕಾಲೇಜು ಪ್ರಾಚಾರ್ಯ ಪೊಲೀಸ್ ಪಾಟೀಲ್ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು. ವಿಜಯನಗರ ಕಾಲೇಜು ಮುಂದೆ ಕೆಲಕಾಲ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!