ಪ್ರವೇಶಕ್ಕೆ ಅರ್ಜಿ ಆಹ್ವಾನ
ಬಳ್ಳಾರಿ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಬಯಸುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿದಾರರು 5ನೇ ತರಗತಿಯಲ್ಲಿ ಶೇ. 60ಕ್ಕಿಂತ ಹೆಚ್ಚು ಅಂಕ ಪಡೆದಿರಬೇಕು. ಪ್ರತಿಷ್ಠಿತ ಖಾಸಗಿ ಶಾಲೆಗಳಿಗೆ ಪ್ರವೇಶಾವಕಾಶ ನೀಡಲು ಆಯ್ಕೆ ಮಾಡಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಇಲಾಖೆ ಆರ್ಥಿಕ ನೆರವು ನೀಡಲಿದೆ. ಆಸಕ್ತರು ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಜು. 18ರೊಳಗಾಗಿ ಸಲ್ಲಿಸಬೇಕು. ಮಾಹಿತಿಗಾಗಿ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅಥವಾ ಆಯಾ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಅಥವಾ ದೂ.ಸಂ-08392-267932ಗೆ ಸಂಪರ್ಕಿಸಬಹುದೆಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಎನ್. ರಾಜಪ್ಪ ತಿಳಿಸಿದ್ದಾರೆ.