ಇಂದು ನೀರಾವರಿ ಸಲಹಾ ಸಮಿತಿ ಸಭೆ
ಬಳ್ಳಾರಿ: ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ 97ನೇ ಸಭೆ ಜು. 9ರಂದು ಬೆಳಗ್ಗೆ 11ಕ್ಕೆ ಮುನಿರಾಬಾದಿನಲ್ಲಿರುವ ತುಂಗಭದ್ರಾ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ನಡೆಯಲಿದೆ ಎಂದು ಸಮಿತಿ ಕಾರ್ಯದರ್ಶಿ ಎಸ್.ಎಚ್. ಮಂಜಪ್ಪ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಅಧ್ಯಕ್ಷತೆಯಲ್ಲಿ ಸಭೆ ಜರುಗಲಿದ್ದು, ಸಮಿತಿ ಸದಸ್ಯರು, ಅಧಿಕಾರಿಗಳು ಸಭೆಗೆ ಆಗಮಿಸಿ ಸಲಹೆ ನೀಡಬೇಕೆಂದು ಅವರು ಮನವಿ ಮಾಡಿದ್ದಾರೆ. ಸಭೆಯಲ್ಲಿ 2013ನೇ ಸಾಲಿನ ಮುಂಗಾರು ಹಂಗಾಮಿಗೆ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ವಿವಿಧ ಕಾಲುವೆಗಳಿಗೆ ನೀರನ್ನು ಒದಗಿಸುವ ಬಗ್ಗೆ, ಅಧಿಸೂಚನೆ ಹೊರಡಿಸುವ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.