ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ನಾಳೆ ಅನ್ನಭಾಗ್ಯ ಯೋಜನೆಗೆ ಚಾಲನೆ

Lingaraj Badiger
Updated On : 9 Jul 2013, 11:43 am

ಬಳ್ಳಾರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಜು. 10ರಂದು ಬೆಳಗ್ಗೆ 11 ಗಂಟೆಗೆ ನಗರದ 5ನೇ ವಾರ್ಡ್ ಮುಂಡರಗಿಯಲ್ಲಿ ಬಿಪಿಎಲ್ ಕುಟುಂಬಕ್ಕೆ ಪ್ರತಿ ಕೆ.ಜಿ.ಗೆ ರು. 1 ದರದಲ್ಲಿ 30 ಕೆ.ಜಿ. ಅಕ್ಕಿ ವಿತರಣೆಯ ಅನ್ನಭಾಗ್ಯ ಯೋಜನೆಯ ಉದ್ಘಾಟನಾ ಸಮಾರಂಭ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಾರ್ಮಿಕ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಉದ್ಘಾಟಿಸಲಿದ್ದಾರೆ. ಬಳ್ಳಾರಿ ನಗರ ಶಾಸಕ ಅನಿಲ್ ಲಾಡ್ ಅಧ್ಯಕ್ಷತೆ ವಹಿಸಲಿದ್ದಾರೆ.  ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಸುಮಂಗಳ ಗುಬಾಜಿ, ಸಂಸದೆ ಜೆ. ಶಾಂತಾ, ಕೊಪ್ಪಳ ಲೋಕಸಭಾ ಸದಸ್ಯ ಶಿವರಾಮಗೌಡ, ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯ್ಕ, ಹೊಸಪೇಟೆ ಶಾಸಕ ಆನಂದ್ ಸಿಂಗ್, ಕಂಪ್ಲಿ ಶಾಸಕ ಟಿ.ಎಚ್. ಸುರೇಶ್ ಬಾಬು, ಸಿರುಗುಪ್ಪ ಶಾಸಕ ಬಿ.ಎಂ. ನಾಗರಾಜ, ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ಶ್ರೀರಾಮುಲು, ಸಂಡೂರು ಶಾಸಕ ಇ. ತುಕಾರಾಂ, ಕೂಡ್ಲಿಗಿ ಶಾಸಕ ಬಿ. ನಾಗೇಂದ್ರ, ವಿಧಾನ ಪರಿಷತ್ ಸದಸ್ಯರಾದ ಮೃತ್ಯುಂಜಯ ಜಿನಗಾ ಹಾಗೂ ಅಮರನಾಥ ಪಾಟೀಲ್ ಮತ್ತಿತರರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.ಹೊಸಪೇಟೆಯಲ್ಲಿ ಉತ್ತಮ ಮಳೆ
ಹೊಸಪೇಟೆ: ತಾಲೂಕಿನಾದ್ಯಂತ ಭಾನುವಾರ ಸಂಜೆಯಿಂದ ತುಂತುರು ಮಳೆ ಸುರಿದಿದೆ. ರಾತ್ರಿ ವೇಳೆಗೆ ಕೆಲ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ ಎಂದು ವರದಿಯಾಗಿದೆ. ಹೊಸಪೇಟೆ ನಗರದಲ್ಲಿ 26.8 ಮಿ.ಮೀ., ಕಮಲಾಪುರದಲ್ಲಿ 36.0 ಮಿ.ಮೀ., ಕಂಪ್ಲಿಯಲ್ಲಿ 15.2 ಮಿ.ಮೀ., ಗಾದಿಗನೂರಿನಲ್ಲಿ 14.2 ಮಿ.ಮೀ., ಮರಿಯಮ್ಮನಹಳ್ಳಿಯಲ್ಲಿ 6.0 ಮಿ.ಮೀ., ಟಿ.ಬಿ. ಡ್ಯಾಂನಲ್ಲಿ 24.6 ಮಿ.ಮೀ. ಹಾಗೂ ನಗರದ ರೈಲ್ವೆ ನಿಲ್ದಾಣ ಪ್ರದೇಶದಲ್ಲಿ 32.0 ಮಿ.ಮೀ. ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಹೊಸಪೇಟೆ ನಗರದಲ್ಲಿ ಉತ್ತಮ ಮಳೆ ಸುರಿದಿದ್ದರಿಂದ ನಗರದ ತಗ್ಗು ಪ್ರದೇಶಗಳೆಲ್ಲಾ ಜಲಾವೃತ್ತವಾಗಿದ್ದು, ರಸ್ತೆಗಳ ಮೇಲೆಲ್ಲಾ ಮಳೆ ನೀರು ನಿಂತು ಸಾರ್ವಜನಿಕರು, ದ್ವಿಚಕ್ರ ವಾಹನ ಸವಾರರು ಸಂಚರಿಸಲು ಪರದಾಡುವಂತಾಗಿತ್ತು. ಸೋಮವಾರ ಸಂಜೆಯಿಂದ ಮೋಡ ಕವಿದ ವಾತಾವರಣವಿದೆ. ಕೆಲ ಪ್ರದೇಶದಲ್ಲಿ ಸೋಮವಾರ ಸಂಜೆಯಿಂದ ತುಂತುರು ಮಳೆ ಸುರಿದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement