ಇಂದು ಅಹವಾಲು ಸ್ವೀಕಾರ
ಬಳ್ಳಾರಿ: ಧಾರವಾಡದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯವರು ಜು. 11ರಂದು ಮಾಜಿ ಸೈನಿಕರ ಮತ್ತು ಅವರ ಅವಲಂಬಿತರ ಕುಂದುಕೊರತೆ ಮತ್ತು ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಮಾಜಿ ಸೈನಿಕರು ಬಳ್ಳಾರಿ ಕೋಟೆ ಪ್ರದೇಶದಲ್ಲಿರುವ ಕ್ಯಾಂಪ್ ಕಾರ್ಯಾಲಯಕ್ಕೆ ತಮ್ಮ ಸೇವಾ ದಾಖಲೆಗಳು ಹಾಗೂ ಗುರುತಿನ ಚೀಟಿಯೊಂದಿಗೆ ಆಗಮಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದೆಂದು ಉಪನಿರ್ದೇಶಕ ಈಶ್ವರ ಕಡೊಳ್ಳಿ ತಿಳಿಸಿದ್ದಾರೆ.
ಉಪ ಲೋಕಾಯುಕ್ತ ಸುಭಾಷ್ ಅಡಿ ಅವರು ಜು. 11 ಹಾಗೂ 12ರಂದು ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಸಾರ್ವಜನಿಕ ಕುಂದು ಕೊರತೆ ಸಭೆ ನಡೆಸಲಿದ್ದಾರೆ. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಖುದ್ದಾಗಿ ಸಲ್ಲಿಸಬಹುದು.
--