ಬಳ್ಳಾರಿ: 71.7 ಮಿಮೀ ಮಳೆ
ಬಳ್ಳಾರಿ: ಜಿಲ್ಲೆಯಲ್ಲಿ ಮಂಗಳವಾರ 71.7 ಮಿ.ಮೀ. ಮಳೆಯಾಗಿದೆ. ಬಳ್ಳಾರಿ ತಾಲೂಕಿನಲ್ಲಿ 2.5 ಮಿ.ಮೀ, ಹಡಗಲಿ-4.2 ಮಿ.ಮೀ., ಹಗರಿಬೊಮ್ಮನಹಳ್ಳಿ-4.6 ಮಿ.ಮೀ., ಹೊಸಪೇಟೆ-5.1ಮಿ.ಮೀ., ಸಂಡೂರು-5.4ಮಿ.ಮೀ.,ಸಿರುಗುಪ್ಪ-4 ಮಿ.ಮೀ. ಸೇರಿದಂತೆ ಒಟ್ಟು 71.7 ಮಿ.ಮೀ. ಮಳೆಯಾಗಿದೆ. ಈ ತಿಂಗಳಲ್ಲಿ ಜು. 16ರ ವರೆಗೆ ಸರಾಸರಿ 56.6 ಮಿ.ಮೀ. ಮಳೆಯಾದಂತಾಗಿದೆ ಎಂದು ಜಿಲ್ಲಾ ಸಾಂಖ್ಯಿಕ ಅಧಿಕಾರಿ ತಿಳಿಸಿದ್ದಾರೆ.
ಅಂಗನವಾಡಿ ಹುದ್ದೆಗೆ ಅರ್ಜಿ
ಬಳ್ಳಾರಿ: ಕೂಡ್ಲಿಗಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯಡಿ ಜರ್ಮಲಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಎ. ದಿಬ್ಬದಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹುದ್ದೆಯ ಆಯ್ಕೆಯನ್ನು ಕೈಬಿಡಲಾಗಿದೆ ಎಂದು ಕೂಡ್ಲಿಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ. ಎ. ದಿಬ್ಬದಹಳ್ಳಿ ಗ್ರಾಮದ ಬದಲಾಗಿ ಗುಂಡಮುಣುಗು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಓಬಳಶೆಟ್ಟಿಹಳ್ಳಿಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಯನ್ನು ಸಾಮಾನ್ಯ ವರ್ಗಕ್ಕೆ ಮೀಸಲಿರಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕೂಡ್ಲಿಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಯನ್ನು ಸಂಪರ್ಕಿಸಿ.