ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಸೂರಿಗೆ ಆಗ್ರಹಿಸಿ ಪ್ರತಿಭಟನೆ

Lingaraj Badiger
Updated On : 20 Jul 2013, 12:07 pm

ಬಳ್ಳಾರಿ: ನಗರದಲ್ಲಿ ಹಲವು ವರ್ಷಗಳಿಂದ ವಾಸವಾಗಿರುವ ನಿವೇಶನ ರಹಿತರಿಗೆ ನಿವೇಶನ ನೀಡಬೇಕು. ವಸತಿ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ, ಅಖಿಲ ಭಾರತ ಯುವಜನ ಫೆಡರೇಷನ್ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನೂರಾರು ವಸತಿರಹಿತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ನಗರದ ಕನಕದುರ್ಗಮ್ಮ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಪ್ರತಿಭಟನಾಕಾರರು ರಾಯಲ್ ವೃತ್ತದ ಮೂಲಕ ಮಹಾನಗರ ಪಾಲಿಕೆ ಬಳಿ ಜಮಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ತಮ್ಮ ಬೇಡಿಕೆಗಳ ಮನವಿಯನ್ನು ಮಹಾನಗರ ಪಾಲಿಕೆಯ ಆಯುಕ್ತರಿಗೆ ಸಲ್ಲಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಎಐವೈಎಫ್‌ನ ಜಿಲ್ಲಾಧ್ಯಕ್ಷ ಸಂಗನಕಲ್ಲು ಸಿ.ಕಟ್ಟೆಬಸಪ್ಪ, ಬಳ್ಳಾರಿ ನಗರದಲ್ಲಿ ಹಲವು ವರ್ಷಗಳಿಂದ ಅನೇಕ ಬಡಜನರು ನಿವೇಶನ ವಿಲ್ಲದೇ ವಾಸಮಾಡುತ್ತಿದ್ದಾರೆ. ಆದರೆ ಸರ್ಕಾರ ಮಾತ್ರ ಬಡವರಿಗೆ ಇದುವರೆಗೂ ನಿವೇಶನವಾಗಲಿ-ವಸತಿಯಾಗಲಿ ಒದಗಿಸದೇ ಇರುವುದು ಶೋಚನೀಯ ಸಂಗತಿಯಾಗಿದ್ದು, ಕೂಡಲೇ ನಗರದ 400ಕ್ಕೂ ಹೆಚ್ಚು ಕುಟುಂಬಗಳಿಗೆ ನಿವೇಶನ ಮತ್ತು ವಸತಿ ಸೌಲಭ್ಯವನ್ನು ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.
ನಗರದ ತಾಳೂರು ರಸ್ತೆ ಸೇರಿದಂತೆ ಇತರ ಭಾಗಗಳಲ್ಲಿನ ಕಾಲುವೆ ಪಕ್ಕದಲ್ಲಿನ ಸರ್ಕಾರದ ಜಾಗದಲ್ಲಿ ವಾಸವಾಗಿರುವವರಿಗೆ ಹಕ್ಕುಪತ್ರಗಳನ್ನು ನೀಡಬೇಕು. ವಸತಿರಹಿತರಿಗೆ ನಿವೇಶನ, ಮನೆಗಳನ್ನು ವಿತರಿಸಬೇಕು. ಮಹಿಳೆಯರಿಗೆ ಶೌಚಾಲಯ ಒದಗಿಸಬೇಕು ಹಾಗೂ ಅತಿ ಹಿಂದುಳಿದ ಪ್ರದೇಶಗಳಿಗೆ ಕುಡಿವ ನೀರು, ಬೀದಿ ದೀಪ, ಚರಂಡಿ ಸೇರಿದಂತೆ ಇತರ ಸೌಲಭ್ಯಗಳನ್ನು ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.  ಪ್ರತಿಭಟನೆಯಲ್ಲಿ ಸಮಿತಿ ಮುಖಂಡರಾದ ಹೊನ್ನಳ್ಳಿ ಈಶ್ವರ್, ರವಿಕುಮಾರ್, ಅಂಜಿನಿ, ಗಿಡ್ಡ ಬಸವರಾಜ್, ಶಂಕರ್, ಕೃಷ್ಣಮೂರ್ತಿ, ಶಂಕರಗೌಡ, ಯರ್ರಿಸ್ವಾಮಿ ಇತರರಿದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement