ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಅಭಿವೃದ್ಧಿ ಯೋಜನೆಗಳು ಅನುಷ್ಠಾನಗೊಳ್ಳಲಿ

Mainashree
Updated On : 25 Jul 2013, 11:14 am

ಬಳ್ಳಾರಿ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳ ಸಮನ್ವಯತೆಯಿಂದ ಅನುಷ್ಠಾನಗೊಳಿಸುವ ಮೂಲಕ ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಂ. ಮಂಜುನಾಥ ನಾಯಕ್ ಸೂಚಿಸಿದರು.
ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ, ಪಿಡಿಓ ಮತ್ತು ಗ್ರಾಮ ಪಂಚಾಯಿತಿ ನೋಡಲ್ ಅಧಿಕಾರಿಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ, ವಸತಿ ಯೋಜನೆಗಳು, ನಿರ್ಮಲ ಭಾರತ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಶೇ. 100ರಷ್ಟು ಪ್ರಗತಿ ಸಾಧಿಸಲು ಕ್ರಮ ಕೈಗೊಳ್ಳಬೇಕು. ಯಾವುದೇ ನ್ಯೂನತೆಯಿದ್ದಲ್ಲಿ ಮೇಲಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು. ತೆರಿಗೆ ವಸೂಲಾತಿಯನ್ನು ಕ್ರಮಬದ್ಧವಾಗಿ ಮಾಡಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗಳನ್ನು ಕೂಡಲೇ ಪ್ರಾರಂಭಿಸಿ ಕಾಮಗಾರಿಗಳ ಹಣವನ್ನು ತಕ್ಷಣವೇ ಪಾವತಿಸಬೇಕು. ಗ್ರಾಮ ಪಂಚಾಯಿತಿ ನೋಡಲ್ ಅಧಿಕಾರಿಗಳು ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸುವಂತೆ ತಿಳಿಸಿದರು.
ಕರ ವಸೂಲಾತಿಯಲ್ಲಿ ಪ್ರಗತಿ ಕುಂಠಿತವಾಗಿದ್ದು ನಿಗದಿಪಡಿಸಿದಂತೆ ಕರ ವಸೂಲಾತಿ ಮಾಡಿ ಪಂಚತಂತ್ರದಲ್ಲಿ ಮಾಹಿತಿಯನ್ನು ಗಣಕೀಕರಿಸುವಂತೆ ಮುಖ್ಯ ಲೆಕ್ಕಾಧಿಕಾರಿ ಚೆನ್ನಪ್ಪ ಸೂಚಿಸಿದರು. ಸಭೆಯಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷ ವಿ. ಗಾದಿಲಿಂಗಪ್ಪ, ಉಪಾಧ್ಯಕ್ಷೆ ಮಾರೆಮ್ಮ, ಕಾರ್ಯನಿರ್ವಾಹಕಾಧಿಕಾರಿ ಜಾನಕೀರಾಂ, ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಓ, ನೋಡಲ್ ಅಧಿಕಾರಿಗಳು ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement