ವಿದ್ಯಾರ್ಥಿ ಆತ್ಮಹತ್ಯೆ
ಬಳ್ಳಾರಿ: ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಅನುತ್ತೀರ್ಣನಾಗಿದ್ದೇನೆಂದು ಬೇಸರಗೊಂಡು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಮೃತನನ್ನು ನೆಹರು ಕಾಲೋನಿ ನಿವಾಸಿ ಸಂದೀಪ್ ಮಲ್ಲಿಕಾರ್ಜುನ (20) ಎಂದು ಗುರುತಿಸಲಾಗಿದೆ. ಈತನು ಬಳ್ಳಾರಿಯ ರಾವ್ ಬಹದ್ದೂರ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತಿದ್ದ. ಈ ಕುರಿತು ಬಳ್ಳಾರಿ ರೇಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.