ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಮದ್ಯ ಅಕ್ರಮ ಮಾರಾಟ: ಓರ್ವನ ಬಂಧನ

Lingaraj Badiger
Updated On : 30 Jul 2013, 10:49 am

ಬಳ್ಳಾರಿ: ಹೋಟೆಲ್‌ನಲ್ಲಿ ಅನಧಿಕೃತವಾಗಿ ಮದ್ಯ ಮಾರಾಟ ಮಾಡುತ್ತಿದ್ದಾಗ ಸೋಮವಾರ ಪೊಲೀಸರು ದಾಳಿ ನಡೆಸಿ, ಓರ್ವನನ್ನು ಬಂಧಿಸಿ, 68 ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನು ಗಂಗಾವತಿಯ ಸಿರವಾರ ವೀರೇಶ್ (38) ಎನ್ನಲಾಗಿದೆ. ಕಂಪ್ಲಿ ಕೋಟೆ ಬಳಿ ಕಂಪ್ಲಿ- ಗಂಗಾವತಿ ರಸ್ತೆ ಪಕ್ಕದಲ್ಲಿರುವ ಹೋಟೆಲ್‌ಗೆ ಬರುವ ಗ್ರಾಹಕರಿಗೆ ಮದ್ಯದ ಬಾಟಲಿಗಳನ್ನು ಮಾರಾಟ ಮಾಡುತ್ತಿದ್ದಾನೆ ಎಂಬ ಮಾಹಿತಿ ಮೇರೆಗೆ ಕಂಪ್ಲಿ ಪೊಲೀಸರು ದಾಳಿ ನಡೆಸಿ, ರು. 5,497 ಮೌಲ್ಯದ 68 ಮದ್ಯದ ಬಾಟಲಿಗಳನ್ನು ಜಪ್ತಿ ಮಾಡಿಕೊಂಡು, ಆರೋಪಿಯನ್ನು ಬಂಧಿಸಿದ್ದಾರೆ. ಕಂಪ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಟ್ಕಾ: ನಾಲ್ವರ ಬಂಧನ
ಬಳ್ಳಾರಿ: ಕಕ್ಕಬೇವಿನಹಳ್ಳಿ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟ ಆಡುತ್ತಿದ್ದ ಅಡ್ಡೆ ಮೇಲೆ ಗ್ರಾಮೀಣ ಠಾಣಾ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿ, ಅವರಿಂದ ರು. 3100 ವಶಪಡಿಸಿಕೊಂಡಿದ್ದಾರೆ. ಕಕ್ಕಬೇವಿನಹಳ್ಳಿ ಗ್ರಾಮದ ಶಂಕರಬಂಡೆ ರಸ್ತೆಯಲ್ಲಿರುವ ಸರ್ಕಾರಿ ಶಾಲೆ ಸಮೀಪದ ಮಾರಾಟ ಮಳಿಗೆಯಲ್ಲಿ ಇಸ್ಪೀಟ್ ಆಡುತ್ತಿದ್ದಾಗ ದಾಳಿ ನಡೆಸಿ, 7 ಜನರಲ್ಲಿ ನಾಲ್ಕು ಜನರನ್ನು ಬಂಧಿಸಿ, ಇನ್ನು 3 ಆರೋಪಿಗಳು ಮೋಟರ್ ಬೈಕ್ ಬಿಟ್ಟು ಪರಾರಿಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement