ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Lingaraj Badiger
Updated On : 31 Jul 2013, 10:56 am

ಬಳ್ಳಾರಿ: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕವು 2013ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಒಟ್ಟು ಆರು ವಿಷಯಗಳಲ್ಲಿ 531ಕ್ಕೂ ಹೆಚ್ಚು ಅಂಕ ಪಡೆದ, ದ್ವಿತೀಯ ಪಿಯುನಲ್ಲಿ ಒಟ್ಟು 510ಕ್ಕೂ ಹೆಚ್ಚು ಅಂಕಗಳಿಸಿದ ವೀರಶೈವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಿದೆ. ಪ್ರತಿ ವರ್ಷದಂತೆ ಈ ವರ್ಷವೂ ಎಸ್ಸೆಸ್ಸೆಲ್ಸಿ ಟಾಪ್-10 ಮತ್ತು ಪಿಯುಸಿ ಟಾಪ್-10 ಎಂದು ಗುರುತಿಸಿ, ವೀರಶೈವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ವಿದ್ಯಾರ್ಥಿಗಳು ಅರ್ಜಿಯನ್ನು ಆರ್.ಎಚ್.ಎಂ. ಚನ್ನಬಸವಸ್ವಾಮಿ, ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ, 1ನೇ ಮೇನ್, 4ನೇ ಕ್ರಾಸ್ ಬಸವೇಶ್ವರ ನಗರ, ಬಳ್ಳಾರಿ ಇವರಿಗೆ ಆ. 20ರೊಳಗೆ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ ಮೊ.ಸಂ-9481564712ಗೆ ಸಂಪರ್ಕಿಸಬಹುದಾಗಿದೆ. ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನಗರದ ಹೊರವಲಯದ ಸದ್ಗುರು ಮಹಾದೇವತಾತನವರ ಸಭಾಭವನದಲ್ಲಿ ಸೆಪ್ಟೆಂಬರ್‌ನಲ್ಲಿ ಜರುಗಲಿದೆ ಎಂದು ಕ.ರಾ.ವೀ.ಲಿಂ. ನೌಕರರ ಕ್ಷೇಮಾಭಿವೃದ್ಧಿ ಸಂಘ ಪ್ರಧಾನ ಕಾರ್ಯದರ್ಶಿ ಆರ್.ಎಚ್.ಎಂ. ಚನ್ನಬಸವಸ್ವಾಮಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement