ವಿದ್ಯಾರ್ಥಿ ವೇತನಕ್ಕೆ ಆಹ್ವಾನ
ಬಳ್ಳಾರಿ: ಅಂಗವಿಕಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ವ್ಯಾಪ್ತಿಯ ಗ್ರಾಪಂಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ಎಂಆರ್‌ಡಬ್ಲ್ಯು ಇವರಿಂದ ಅರ್ಜಿ ಪಡೆದು ಸಲ್ಲಿಸಬಹುದು. ಅರ್ಜಿಯನ್ನು ಸಂಬಂಧಿಸಿದ ಶಾಲಾ, ಕಾಲೇಜುಗಳ ಮುಖ್ಯಸ್ಥರ ಮೂಲಕ ಸಲ್ಲಿಸಬೇಕು. ಅರ್ಜಿದಾರರು 2012-13ನೇ ಸಾಲಿನಲ್ಲಿ ಶೇ. 40ರಷ್ಟು ಅಂಕ ಪಡೆದ ವಿದ್ಯಾರ್ಹತೆ ಅಂಕಪಟ್ಟಿ, ಅಂಗವಿಕಲತೆ ಗುರುತಿನ ಚೀಟಿ, ಶೇ. 40 ಅಥವಾ ಅದಕ್ಕಿಂತಲೂ ಹೆಚ್ಚಿನ ಅಂಗವಿಕಲತೆ ಹೊಂದಿದ ಬಗ್ಗೆ ವೈದ್ಯಕೀಯ ಮಂಡಳಿಯಿಂದ ಪಡೆದ ಅಂಗವಿಕಲತೆ ಪ್ರಮಾಣಪತ್ರ, ಅಂಗವಿಕಲತೆ ಕಾಣುವ ಇತ್ತೀಚಿನ ಭಾವಚಿತ್ರ, ಮತ್ತಿತರ ದಾಖಲೆಗಳನ್ನು ಲಗತ್ತಿಸಿರಬೇಕು. 2013-14ನೇ ಸಾಲಿನಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವ ಕುರಿತು ಶಾಲಾ, ಕಾಲೇಜುಗಳ ಮುಖ್ಯಸ್ಥರಿಂದ ಅರ್ಜಿ ನಮೂನೆಯಲ್ಲಿ ದೃಢೀಕರಿಸಿರಬೇಕು. ಸರ್ಕಾರಿ ವಸತಿ ನಿಲಯಗಳಲ್ಲಿ ಪ್ರವೇಶ ಪಡೆದವರು, ಎಸ್ಸಿ, ಎಸ್ಟಿ ಕಚೇರಿಯಲ್ಲಿ ವಿದ್ಯಾರ್ಥಿ ವೇತನ ತೆಗೆದುಕೊಂಡ ವಿದ್ಯಾರ್ಥಿಗಳು, ದೂರ ಶಿಕ್ಷಣದಲ್ಲಿ ವ್ಯಾಸಂಗ ಮಾಡಿ ಪಾಸಾದವರು ಅರ್ಜಿ ಸಲ್ಲಿಸಲು ಅರ್ಹರಲ್ಲ. ಅರ್ಜಿ ನಮೂನೆಯನ್ನು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳು ಅಥವಾ ಆಯಾ ಶಿಶು ಅಭಿವೃದ್ಧಿ ಅಭಿವೃದ್ಧಿ ಯೋಜನಾಧಿಕಾರಿಗಳು ಅಥವಾ ಗ್ರಾಪಂಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ಎಸ್.ಆರ್.ಡಬ್ಲ್ಯು. ಅವರಿಂದ ಪಡೆದು ಭರ್ತಿ ಮಾಡಿ ಆಗಸ್ಟ್ 15ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ-08392-267886ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.