ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ
ಬಳ್ಳಾರಿ: ಎದೆನೋವಿನ ಬಾಧೆ ತಾಳಲಾರದೆ ಗೃಹಿಣಿಯೋರ್ವಳು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮೋಕಾ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ಮೋಕಾ ಗ್ರಾಮದ ಮಲ್ಲಮ್ಮ (35) ಎಂದು ಗುರುತಿಸಲಾಗಿದೆ.
ಅವರು ನಾಲ್ಕೈದು ವರ್ಷಗಳಿಂದ ಎದೆನೋವಿನಿಂದ ಬಳಲುತ್ತಿದ್ದರು. ಸೋಮವಾರ ಸಂಜೆ ಎದೆನೋವು ಹೆಚ್ಚಾಗಿತ್ತು. ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ನೋಡಿ, ವಿಷ ಸೇವಿಸಿದ್ದಾರೆ.
ಕೂಡಲೇ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿಯೇ ಮೃತಪಟ್ಟಿದ್ದಾಳೆ. ಈ ಕುರಿತು ಮೋಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.