ಸಿರುಗುಪ್ಪ: ಯುವತಿ ಆತ್ಮಹತ್ಯೆ
ಸಿರುಗುಪ್ಪ: ಯುವತಿಯೊರ್ವಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಉತ್ತನೂರು ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ. ಸಿದ್ದಲಿಂಗಮ್ಮ (16) ಮೃತ ಯುವತಿ. ಈಕೆ ಗ್ರಾಮದ ಹೊರವಲಯದ ಹತ್ತಿ ಬಿತ್ತನೆ ಮಾಡಿದ ಹೊಲಕ್ಕೆ ಹೋಗುವುದಾಗಿ ಹೇಳಿ ಹೋದವಳು ಸಂಜೆಯಾದರೂ ಮರಳಿ ಮನೆಗೆ ಬಾರದೆ ಇರುವುದನ್ನು ಗಮನಿಸಿದ ಮನೆಯವರು ಹೊಲಕ್ಕೆ ಹೋಗಿ ಗುಡಿಸಲಿನಲ್ಲಿ ನೋಡಿದಾಗ ಈ ಘಟನೆಯು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸಂಬಂಧಿಕರು ಕೊಲೆ ಶಂಕೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಮೃತದೇಹವನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಮರಣೊತ್ತರ ಪರೀಕ್ಷೆ ನಡೆಸಿ ನಂತರ ಶವವನ್ನು ಸಂಬಂಧಿಕರಿಗೆ ನೀಡಲಾಗಿದೆ. ಸಿರಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಕಾಳಿಕೃಷ್ಣ ತನಿಖೆ ಕೈಗೊಂಡಿದ್ದಾರೆ.