ಕಾರ್ಮಿಕರಿಗೆ ಭೀಮಾ ಯೋಜನೆ ಸವಲತ್ತು: ನಾಯ್ಕ
ಬಳ್ಳಾರಿ: ಕಾರ್ಮಿಕ ಕ್ಷೇಮಾಭಿವೃದ್ಧಿ ಯೋಜನೆಯಡಿ ಕಾರ್ಮಿಕರನ್ನು ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆಯಡಿ ಸೇರಿಸುವ ಚಿಂತನೆ ನಡೆದಿದೆ ಎಂದು ಕಾರ್ಮಿಕ ಖಾತೆ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಯೋಜನೆಯಲ್ಲಿ ಬೀಡಿ ಕಾರ್ಮಿಕರು, ಟ್ಯಾಕ್ಸಿ ಚಾಲಕರು, ಕಟ್ಟಡ ಕಾರ್ಮಿಕರನ್ನು ಸೇರಿಸಲಾಗುತ್ತದೆ. ಇಲಾಖೆಯಲ್ಲಿನ ಸಿಬ್ಬಂದಿ ಕೊರತೆಯನ್ನು ನೀಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಲಾಗುತ್ತದೆ ಎಂದು ಹೇಳಿದರು.