ಬಳ್ಳಾರಿ

'ಟಿಬಿ ಡ್ಯಾಂ ನೀರಿನ ಸಾಮರ್ಥ್ಯ ಹೆಚ್ಚಿಸಲು ಕಾರ್ಯ ಯೋಜನೆ ರೂಪಿಸಿ'

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಜೂ.16
ತುಂಗಭದ್ರಾ ಜಲಾಶಯದಲ್ಲಿನ ನೀರಿನ ಸದ್ಬಳಕೆ ಕುರಿತಾಗಿ ಜಲಾಶಯದ ಅಧ್ಯಯನ ಸಮಿತಿ ಬಳ್ಳಾರಿಯ ಪೊಲೀಸ್ ಜಿಮ್ಖಾನದಲ್ಲಿ ಏರ್ಪಡಿಸಿದ್ದ ವಿಚಾರ ಸಂಕಿರಣದಲ್ಲಿ ಉತ್ತಮ ಸಲಹೆ, ಸೂಚನೆಯನ್ನು ರೈತ ಮುಖಂಡರು, ಜನಪ್ರತಿನಿಧಿಗಳು, ರಾಜಕಾರಣಿಗಳು ನೀಡುವ ಮೂಲಕ ಅರ್ಥಪೂರ್ಣ ಕಾರ್ಯಕ್ರಮ ನಡೆಯಿತು.
ಜಲಾಶಯದಲ್ಲಿ ಹೂಳಿನ ಪ್ರಮಾಣ ಹೆಚ್ಚಾಗಿರುವ ಸಂದರ್ಭದಲ್ಲಿ ಜಲಾಶಯದ ನೀರಿನ ಸಂಗ್ರಹಣಾ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಯಾವ ಕಾರ್ಯಯೋಜನೆ ರೂಪಿಸಿದರೆ ಒಳಿತು ಎಂಬ ಸಲಹೆ ಚರ್ಚೆ ವೇಳೆ ಬಂತು.
ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಸಿ. ಕೊಂಡಯ್ಯ ಮಾತನಾಡಿ, ಕಾವೇರಿಯಂತೆ ತುಂಗಭದ್ರಾ ಜಲಾಶಯದ ಸಮಸ್ಯೆ ಭುಗಿಲೇಳದಿರಲಿ ಎಂಬ ಆಶಯ ಎರಡು ರಾಜ್ಯಗಳದ್ದು. ಆಂಧ್ರಪ್ರದೇಶ ಹಾಗೂ ಕರ್ನಾಟಕ ಮಧ್ಯೆ ಉತ್ತಮ ಬಾಂಧವ್ಯ ಇರುವ ಹಿನ್ನೆಲೆಯಲ್ಲಿ ಯಾವುದೇ ಸಮಸ್ಯೆ ಉದ್ಭವಿಸಿಲ್ಲ. ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ರೈತರು, ರಾಜಕಾರಣಿಗಳು, ಎಲ್ಲ ಜನಸಮುದಾಯ ಒಮ್ಮತಕ್ಕೆ ಬಂದು, ನಂತರ ದಿನಗಳಲ್ಲಿ ತಮ್ಮ ನಿರ್ಧಾರಗಳನ್ನು ರಾಜ್ಯ ಮಟ್ಟದಲ್ಲಿ ಚರ್ಚಿಸಿ, ಅನಂತರ ಎರಡು ರಾಜ್ಯಗಳ ಜನಪ್ರತಿನಿಧಿಯೊಂದಿಗೆ ಚರ್ಚಿಸಿ, ಸಮಸ್ಯೆಯನ್ನು ಒಗ್ಗಟ್ಟಿನಿಂದ ಬಗೆಹರಿಸುವ ಪ್ರಯತ್ನ ಇದಾಗಿದೆ ಎಂದು ತಿಳಿಸಿದರು.
ಕೆರೆಗಳಲ್ಲಿ ಸಂಗ್ರಹಿಸಿ: ತುಂಗಭದ್ರಾ ಜಲಾಶಯಕ್ಕೆ ಬರುವ ಹೆಚ್ಚುವರಿ ನೀರಿನ ಸದುಪಯೋಗಪಡಿಸಿಕೊಳ್ಳಬೇಕು. ಆಂಧ್ರಪ್ರದೇಶದಲ್ಲಿ ಜಲಾಶಯದ ನೀರನ್ನು ಕೆರೆಗಳಲ್ಲಿ ಸಂಗ್ರಹಿಸಿ, ನೀರಾವರಿಗೆ ಬಳಸಿದರೆ, ಕರ್ನಾಟಕದಲ್ಲಿ ಇಂಥ ವ್ಯವಸ್ಥೆಗಳಿಲ್ಲ. ನೇರವಾಗಿ ಜಲಾಶಯದ ನೀರನ್ನು ಕಾಲುವೆ ಮೂಲಕ ನೀರಾವರಿಗೆ ಬಳಸಿಕೊಳ್ಳಲಾಗುತ್ತದೆ. ಇದರಿಂದಾಗಿ ಜಲಾಶಯದಲ್ಲಿನ ಹೂಳಿನ ಪ್ರಮಾಣ ಹೆಚ್ಚಾಗಿ ರಾಜ್ಯದ ರೈತರು ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಸಮಸ್ಯೆ ನೀಗಿಸುವ ಬಗ್ಗೆ ಚರ್ಚಿಸಲಾಯಿತು. ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ, ಬ್ಯಾಲೆನ್ಸಿಂಗ್ ರಿಜ್ವೈಯರ್ ಮಾಡುವುದಕ್ಕೆ ಭೂಸ್ವಾಧೀನ ಪ್ರಕ್ರಿಯೆ ಸಮಸ್ಯೆ ಉಂಟಾಗುತ್ತದೆ. ಜಲಾಶಯ ಆಂಧ್ರಪ್ರದೇಶ, ಕರ್ನಾಟಕ ಎರಡು ರಾಜ್ಯಕ್ಕೆ ಸಂಬಂಧಪಟ್ಟಿದ್ದು, ಯಾವುದೇ ನಿರ್ಣಯ ಕೈಗೊಂಡರು ಈ ಕುರಿತಾಗಿ ಆಂಧ್ರಪ್ರದೇಶದೊಂದಿಗೆ ಮಾತುಕತೆ ನಡೆಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದ ಅಸ್ತಿತ್ವವನ್ನು ಮುಂದಿನ ಪೀಳಿಗೆಗೆ ಕಾಪಾಡಿಕೊಳ್ಳಬೇಕಾದರೆ, ಪರ್ಯಾಯ ವ್ಯವಸ್ಥೆ ಅತ್ಯಗತ್ಯವಾಗಿದೆ ಎಂದರು. ತುಂಗಭದ್ರಾ ಜಲಾಶಯದ ಅಧ್ಯಯನ ಸಮಿತಿ ಪಕ್ಷಾತೀತವಾಗಿದ್ದು, ರೈತರಿಗಾಗಿ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ. ರೈತ ಸಮಾವೇಶವಾಗಿದೆ, ರೈತರ ಹಿತದೃಷ್ಟಿಯಿಂದ ವಿಚಾರ ಸಂಕಿರಣ ಮಹತ್ವದ ಪಾತ್ರವಹಿಸುತ್ತದೆ ಎಂದು ತಿಳಿಸಿದರು.
ಕಾಡು ಕಚೇರಿಯನ್ನು ಬಲಿಷ್ಠಗೊಳಿಸಿ: ಮಾಜಿ ಶಾಸಕ ಚಂದ್ರಯ್ಯಸ್ವಾಮಿ, ಈಗಿರುವ ಹಳ್ಳ, ನದಿಗಳಿಗೆ ಬ್ಯಾರೇಜ್ ನಿರ್ಮಿಸಿ, ನೀರು ಬಳಕೆಗೆ ಮುಂದಾದರೆ ಹೂಳು ತುಂಬುವ ಸಮಸ್ಯೆ ಉದ್ಭವಿಸದು. ಈ ನಿಟ್ಟಿನಲ್ಲಿ ಆಲೋಚಿಸಿದರೆ ಏನಿಲ್ಲವೆಂದರೂ 7ರಿಂದ 8 ಟಿಎಂಸಿ ನೀರನ್ನು ಸಂಗ್ರಹಿಸಿ, ನೀರಾವರಿಗೆ, ಕುಡಿಯುವುದಕ್ಕೆ ಬಳಸಿಕೊಳ್ಳಬಹುದು ಎಂದರು. ನಿವೃತ್ತ ಎಂಜಿನಿಯರ್ ಉದ್ದಿಹ್ಯಾಳ್ ಮಾತನಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT