22ರಂದು ಪರಿಸರ ದಿನಾಚರಣೆ, ಪ್ರಶಸ್ತಿ ವಿತರಣೆ
ಬಳ್ಳಾರಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಗೃಹರಕ್ಷಕ ದಳ, ನೋಪಾಸನ ಹಾಗೂ ಗೌತಮ ಬುದ್ಧ ಸ್ಮಾರಕ ವಿದ್ಯಾಸಂಸ್ಥೆ ಆಶ್ರಯದಲ್ಲಿ ಜೂ. 22ರ ಬೆಳಗ್ಗೆ 11.30ಕ್ಕೆ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ 40ನೇ ವಿಶ್ವಪರಿಸರ ದಿನಾಚರಣೆ ಹಾಗೂ ಕರ್ನಾಟಕ ರಾಜ್ಯ ಪರಿಸರ ಮಿತ್ರ ಶಾಲಾ ಪ್ರಶಸ್ತಿ 2012-13 (ಬಳ್ಳಾರಿ ವಿಭಾಗ) ವಿತರಣಾ ಸಮಾರಂಭ ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ಜೆಎಸ್‌ಡಬ್ಲ್ಯು ಸ್ಟೀಲ್ಸ್ ಅಸೋಸಿಯೇಟ್ ವೈಸ್ ಪ್ರೆಸಿಡೆಂಟ್(ಪರಿಸರ) ಎಸ್.ಎಂ.ಆರ್. ಪ್ರಸಾದ್ ಉದ್ಘಾಟಿಸಲಿದ್ದಾರೆ. ಶಿವಮೊಗ್ಗದ ಸಂತೆಕಡೂರು ಕಿಡ್ಸ್ ಸಂಸ್ಥೆಯ ಅಧ್ಯಕ್ಷ ಜಿ.ಎಲ್. ಜನಾರ್ದನ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಪರಿಸರವಾದಿ ಪ್ರೊ. ಪಿ. ಸತ್ಯನಾರಾಯಣರಾವ್ ಮುಖ್ಯ ಅತಿಥಿಗಳಾಗಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಪರಿಸರ ಅಧಿಕಾರಿ ಗೋಪಾಲಕೃಷ್ಣ ಬಿ. ಸಣತಂಗಿ, ಗೃಹರಕ್ಷಕದಳದ ಜಿಲ್ಲಾ ಸಮಾದೇಷ್ಟ ಎಂ.ಎ. ಷಕೀಬ್, ಎಚ್.ಬಿ. ಹಳ್ಳಿ, ಎನ್.ಡಿ. ಕೆರೆ, ಎಸ್‌ಎಲ್‌ಆರ್ ಮೆಟಾಲಿಕ್ಸ್‌ನ ಸಿಇಓ ಕೆ.ಸಿ. ಸಿದ್ದಪ್ಪ, ಗೌತಮ ಬುದ್ಧ ಸ್ಮಾರಕ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ಲಕ್ಕಿ ಪೃಥ್ವಿರಾಜ್ ಅತಿಥಿಗಳಾಗಿ, ಕರಾಮಾನಿ ಮಂಡಳಿಯ ಉಪ ಪರಿಸರ ಅಧಿಕಾರಿ ಸಿ.ಎನ್. ಮಂಜಪ್ಪ, ಸಹಾಯಕ ಪರಿಸರ ಅಧಿಕಾರಿ ಬಿ.ಸಿ. ಶಿವಮೂರ್ತಿ, ಗೃಹರಕ್ಷಕದಳದ ಸೆಕೆಂಡ್ ಇನ್ ಕಮಾಂಡ್ ಎನ್.ಎಸ್. ಲಕ್ಷ್ಮೀನರಸಿಂಹ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕೂಡ್ಲಿಗಿ ತಾಲೂಕು ಬೊಮ್ಮಘಟ್ಟ ಗ್ರಾಮದ ಸೀಡ್ಸ್ ಸಂಸ್ಥೆಯ ಕಾರ್ಯದರ್ಶಿ ಜಿ. ವಿಶ್ವಮೂರ್ತಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಲಿದ್ದಾರೆ. ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಗಳು ಜೂ. 22ರ ಬೆಳಗ್ಗೆ 9ಕ್ಕೆ ನಡೆಯಲಿದ್ದು, ಆಸಕ್ತ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಬಳ್ಳಾರಿ ವಿಭಾಗದ ಪರಿಸರ ಮಿತ್ರ ಶಾಲೆ ಪುರಸ್ಕಾರ ವಿಜೇತರಾದ ಕೂಡ್ಲಿಗಿ ತಾಲೂಕು ಕನ್ನನಾಯಕನಕಟ್ಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ನಂತರ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.