ಬೆಟ್ಟಿಂಗ್: ಮೂವರ ಬಂಧನ
ಹೊಸಪೇಟೆ: ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ಮೂರು ಜನರನ್ನು ನಗರ ಪೊಲೀಸರು ಬಂಧಿಸಿ, ಬಂಧಿತರಿಂದ 11,650 ವಶಪಡಿಸಿಕೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿರುವ ಖಾಸಗಿ ಲಾಡ್ಜ್ ಮೇಲೆ ನಗರ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿದಾಗ ಲಾಡ್ಜ್ನ ರೂಮ್ನಲ್ಲಿ ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಾಮೆಂಟ್ನ ಬುಧವಾರ ನಡೆದ ಇಂಗ್ಲೆಂಡ್ ಹಾಗೂ ಸೌತ್ ಆಫ್ರಿಕಾ ನಡುವಿನ ಪಂದ್ಯಕ್ಕೆ ಸಂಬಂಧಪಟ್ಟಂತೆ ಬೆಟ್ಟಿಂಗ್ನಲ್ಲಿ ತೊಡಗಿಕೊಂಡಿದ್ದ ಶ್ರೀನಿವಾಸ, ಗಣೇಶ್ ಹಾಗೂ ಮಂಜುನಾಥ ಎಂಬುವವರನ್ನು ಬಂಧಿಸಿ, ಬಂಧಿತರಿಂದ 11,650 ಪೊಲೀಸರು ವಶಪಡಿಸಿಕೊಂಡಿದ್ದಾರೆ. ಡಿವೈಎಸ್ಪಿ ವಿ.ಬಿ. ಮಡಿವಾಳರ್ ಮಾರ್ಗದರ್ಶನದಲ್ಲಿ ನಡೆದ ದಾಳಿಯಲ್ಲಿ ನಗರ ಪೊಲೀಸ್ ಠಾಣೆಯ ಪಿಎಸ್ಐ ನಾಗರಾಜ್ ಸೇರಿದಂತೆ ಇತರೆ ಪೊಲೀಸ್ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.